ಇಂದ್ರಾಳಿ ಮೇಲ್ಸೇತುವೆ ಅಂತಿಮ ಕಾಮಗಾರಿ ತ್ವರಿತಗೊಳಿಸಲು ಜಿಲ್ಲಾಧಿಕಾರಿ ಸೂಚನೆ

Upayuktha
0

ಉಡುಪಿ: ಇಂದ್ರಾಳಿ ರೈಲ್ವೆ ಮೇಲ್ಸೇತುವೆ ನಿರ್ಮಾಣದ ಅಂತಿಮ ಘಟ್ಟದ ಕಾಮಗಾರಿಗಳನ್ನು ಕೈಗೊಳ್ಳಲು ಎಲ್ಲಾ ರೀತಿಯ ಅಗತ್ಯ ಸಿದ್ಥತೆಗಳನ್ನು ಮಾಡಿಕೊಳ್ಳುವುದರೊಂದಿಗೆ ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಸೂಚನೆ ನೀಡಿದರು.


ರಾಷ್ಟ್ರೀಯ ಹೆದ್ದಾರಿ 169 ಎ ರ ಉಡುಪಿ ನಗರ ಹಾಗೂ ಮಣಿಪಾಲ್ ರಸ್ತೆಯ ಇಂದ್ರಾಳಿ ಸಮೀಪದ ರೈಲ್ವೆ ಮೇಲ್ಸೇತುವೆ ಅಭಿವೃದ್ಧಿ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿ ಮಾತನಾಡುತ್ತಿದ್ದರು. ರೈಲ್ವೆ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ನಿರ್ಮಾಣದ ವೆಲ್ಡಿಂಗ್ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈಲ್ವೆ ಇಲಾಖೆಯ ವತಿಯಿಂದ ವೆಲ್ಡಿಂಗ್ ಕಾರ್ಯದ ಗುಣಮಟ್ಟವನ್ನು ಸ್ಥಳೀಯವಾಗಿ ಇನ್ಸ್ಪೆಕ್ಷನ್ ನಡೆಸಲಾಗಿದೆ. ಅಂತಿಮವಾಗಿ ರೈಲ್ವೆ ಡಿಸೈನ್ ಮತ್ತು ಸೇಫ್ಟಿ ಆರ್ಗನೈಸೇಷನ್ ಲಕ್ನೋ ತ್ವರಿತವಾಗಿ ಕೈಗೊಳ್ಳಬೇಕು ಎಂದರು.


ರೈಲ್ವೆ ಮೇಲ್ಸೇತುವೆಯಾಗಿ ಕಬ್ಬಿಣದ ಗರ್ಡರ್ ಅನ್ನು ಅಳವಡಿಸಲು ಅಗತ್ಯವಿರುವ ಎಲ್ಲಾ ರೀತಿಯ ಪೂರ್ವ ಸಿದ್ಧತೆಯನ್ನು ಮಾಡಿಕೊಳ್ಳುವುದರೊಂದಿಗೆ ರೈಲ್ವೆ ಇಲಾಖೆಯ ವತಿಯಿಂದ ನಿಗದಿಪಡಿಸುವ ದಿನಾಂಕದಂದು ರೈಲ್ವೆ ಸಂಚಾರವನ್ನು ಸ್ಥಗಿತಗೊಳಿ, ಅಳವಡಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಹೇಳಿದರು.


ಗರ್ಡಲ್ಸ್ ಅನ್ನು ರೈಲ್ವೆ ಮೇಲ್ಸೇತುವೆಯಾಗಿ ಅಳವಡಿಸಲು ಅಗತ್ಯವಿರುವ ಬೃಹತ್ ಕ್ರೇನ್‌ಗಳು, ಜಾಕ್‌ಗಳು, ರೋಲರ್‌ಗಳು, ಸೇರಿದಂತೆ ಅವಶ್ಯವಿರುವ ಸಾಧನಗಳನ್ನು ಸಿದ್ಧಪಡಿಸಿಟ್ಟುಕೊಳ್ಳಬೇಕು ಎಂದ ಅವರು, ಈ ಕಾಮಗಾರಿಯ ಸಂದರ್ಭದಲ್ಲಿ ಸುರಕ್ಷಿತವಾಗಿ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.


ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ಕೊಂಕಣ ರೈಲ್ವೆಯ ಸೀನಿಯರ್‌ ಇಂಜಿನಿಯರ್ ಗೋಪಾಲ ಕೃಷ್ಣ, ಲೋಕೋ ಪಯೋಗಿ ಇಲಾಖೆಯ ಎ.ಇ ಮಂಜುನಾಥ್, ಗುತ್ತಿಗೆದಾರರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top