ಉಡುಪಿ: ಪ್ರವರ್ಗ ಸಿ ಗೆ ಸೇರಿದ 55 ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ರಚನೆಗೆ ಆಹ್ವಾನ

Upayuktha
0

ಉಡುಪಿ: ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಕಾಯ್ದೆ ಅಧಿನಿಮಯ 1997 ರ ಕಲಂ 25 ರನ್ವಯ ಜಿಲ್ಲೆಯಲ್ಲಿರುವ ಪ್ರವರ್ಗ ಸಿ ಗೆ ಸೇರಿದ ಒಟ್ಟು 35 ದೇವಸ್ಥಾನಗಳಿಗೆ ವ್ಯವಸ್ಥಾಪನ ಸಮಿತಿಯನ್ನು ಮೂರು ವರ್ಷಗಳ ಅವಧಿಗೆ ರಚಿಸಲು ಆಸಕ್ತ ಭಕ್ತಾದಿಗಳು ಹಾಗೂ ಸಾರ್ವಜನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.


ಪ್ರವರ್ಗ ಸಿ ದೇವಸ್ಥಾನಗಳ ವಿವರ: ಉದ್ಯಾವರದ ದೇವಸ್ಥಾನಗಳಾದ ಶ್ರೀ ಸಿದ್ಧಿ ವಿನಾಯಕ ದೇವಸ್ಥಾನ, ಶ್ರೀ ಶಂಭುಕಲ್ಲು ವೀರಭದ್ರ ದೇವಸ್ಥಾನ, ಶ್ರೀ ಬ್ರಹ್ಮೇಶ್ವರ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪೆರಂಪಳ್ಳಿ ಶಿವಳ್ಳಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಪೆರಂಪಳ್ಳಿಯ ಶ್ರೀ ಮಹಾವಿಷ್ಣು ದೇವಸ್ಥಾನ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕಾಪು ತಾಲೂಕು ಕಟಪಾಡಿ ಚೊಕ್ಕಾಡಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮಟ್ಟುವಿನ ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನ ಹಾಗೂ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಕಾರ್ಕಳ ತಾಲೂಕು ಬೈಲೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಮರ್ಣೆಯ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಎರ್ಲಪಾಡಿಯ ಶ್ರೀ ವೆಂಕಟರಮಣ ದೇವಸ್ಥಾನ ಹಾಗೂ ಬೋಳ ಪಿಲಿಯೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕುಂದಾಪುರ ತಾಲೂಕಿನ ಕೋಣಿ ಶ್ರೀ ಮಹಾ ಲಿಂಗೇಶ್ವರ ದೇವಸ್ಥಾನ, ಹಾರ್ದಳ್ಳಿ-ಮಂಡಳ್ಳಿಯ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಬೆಳಗೋಡು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ದೇವಲ್ಕುಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಬಸ್ರೂರು ಶ್ರೀ ಓಂಕಾರೇಶ್ವರ ದೇವಸ್ಥಾನ, ಗುಲ್ವಾಡಿ ಗ್ರಾಮದ ಶ್ರೀ ಆಂಜನೇಯ ದೇವಸ್ಥಾನ, ಸಿದ್ದಾಪುರ ಗ್ರಾಮದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ, ಹೊಸಂಗಡಿಯ ಶ್ರೀ ಹೊಳೆ ಶಂಕರನಾರಾಯಣ ದೇವಸ್ಥಾನ, ಇಡೂರು ಕುಂಜ್ಞಾಡಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಹಾಗೂ ದೇವಲ್ಕುಂದ ಶ್ರೀ ವಿಷ್ಣುಮೂರ್ತಿ ದೇವಸ್ಥಾನ, ಬೈಂದೂರು ತಾಲೂಕಿನ ಬಡಾಕೆರೆ ಶ್ರೀ ಲಕ್ಷ್ಮೀ ಜನಾರ್ಧನ ದೇವಸ್ಥಾನ, ಬಿಜೂರು ಅರೆಕಲ್ಲು ಹಿರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಮಟ್ನಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನ, ಬ್ರಹ್ಮಾವರ ತಾಲೂಕಿನ ನೂಜಿಕೆರೆ ಶ್ರೀ ವಿನಾಯಕ ದೇವಸ್ಥಾನ, ಕೆಂಜೂರು ಶ್ರೀ ವೀರೇಶ್ವರ ದೇವಸ್ಥಾನ, ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಚಾಂತಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಹಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಹಲುವಳ್ಳಿ ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಹೆಬ್ರಿ ತಾಲೂಕಿನ ಶ್ರೀ ಪಾಂಡುಕಲ್ಲು (ಶಿವಪುರ) ಕೋಟೆನಾಥ ದೇವಸ್ಥಾನ ಹಾಗೂ ಚಾರಾದ ಶ್ರೀ ಮಹಿಷಮರ್ಧಿನೀ ದೇವಸ್ಥಾನ. 

ಕನಿಷ್ಠ 25 ವರ್ಷ ಮೇಲ್ಪಟ್ಟ ಆಸಕ್ತ ಭಕ್ತಾದಿಗಳು ಯಾವುದೇ ಒಂದು ಅಧಿಸೂಚಿತ ಸಂಸ್ಥೆಯ/ ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಮಾತ್ರ ಸದಸ್ಯತ್ವ ಕೋರಿ ಅರ್ಜಿಯನ್ನು ನಮೂನೆ-1(ಬಿ) (22ನೇ ನಿಯಮ) ನಮೂನೆಯಲ್ಲಿ ಭರ್ತಿ ಮಾಡಿ ಏಪ್ರಿಲ್ 17 ರ ಒಳಗಾಗಿ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ಆಯುಕ್ತರು, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ, ಕೊಠಡಿ ಸಂಖ್ಯೆ 206, ಬಿ ಬ್ಲಾಕ್, ಜಿಲ್ಲಾ ಸಂಕೀರ್ಣ, ರಜತಾದ್ರಿ, ಮಣಿಪಾಲ ಉಡುಪಿ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top