ಉಡುಪಿ: ಸರ್ವಜ್ಞ ಪೀಠಕ್ಕೆ ಸುವರ್ಣ ಕವಚ ಅರ್ಪಣೆ

Chandrashekhara Kulamarva
0


ಉಡುಪಿ: ಪರ್ಯಾಯ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರು ಜಗದ್ಗುರುಗಳಾದ ವಿಶ್ವವಂದ್ಯರಾದ ಶ್ರೀಮದಾನಂದ ತೀರ್ಥ ಶ್ರೀಪಾದರು ಕುಳಿತಿರುವ ದಿವ್ಯ ಸಾನ್ನಿಧ್ಯವಿರುವ ಸರ್ವಜ್ಞ ಪೀಠಕ್ಕೆ ಸುವರ್ಣ ಕವಚವನ್ನು ತೊಡಿಸಿ ಶ್ರೀಕೃಷ್ಣನಿಗೆ, ತಮ್ಮ ಪ್ರಿಯಗುರುಗಳಾದ ಅದಮಾರು ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರ ಮೂಲಕ ಇಂದು (ಏ.14) ಅರ್ಪಣೆ ಮಾಡಿದರು. ಈ ಮೂಲಕ ತಮ್ಮ ಸನ್ಯಾಸಾಶ್ರಮದ ಐವತ್ತನೆಯ ವರ್ಷದ ಆಚರಣೆಯನ್ನು (ಸುವರ್ಣ ಮಹೋತ್ಸವವನ್ನು) ಸಾರ್ಥಕ ಗೊಳಿಸಿಕೊಂಡರು.


ಈ ಸಂದರ್ಭದಲ್ಲಿ ಶ್ರೀಪಾದರ ಅಪೇಕ್ಷೆಯಂತೆ ಈ ಕಾರ್ಯಕ್ರಮದಲ್ಲಿ ಭಂಡಾರಕೇರಿ ಮಠಾಧೀಶರಾದ ಶ್ರೀ ಶ್ರೀ ವಿದ್ಯೇಶ ತೀರ್ಥ ಶ್ರೀಪಾದರು ಭಾಗವಹಿಸಿ ಆಶೀರ್ವಚನವಿತ್ತರು.


ಸರ್ವಜ್ಞ ಪೀಠದಲ್ಲಿ ಶ್ರೀಕೃಷ್ಣ ಮುಖ್ಯಪ್ರಾಣರೊಂದಿಗೆ ಆಚಾರ್ಯರ ರೂಪವೆಂದೆ ಜ್ಞಾನಿಗಳು ಪರಿಗಣಿಸಿದ ಸರ್ವಮೂಲ ಗ್ರಂಥಗಳನ್ನು ಇರಿಸಲಾಗಿದ್ದು ಅವೇ ಮುಖ್ಯಾರ್ಥದಲ್ಲಿ ಸು-ವರ್ಣ ಗಳಿಸಿದ್ದು ಈ ಮೂಲಕ ಸರ್ವಜ್ಞ ಸುವರ್ಣ ಸಿಂಹಾಸರಿಂದ ವೈಷ್ಣವ ಭಕ್ತಿಸಿದ್ದಾಂತ ಪ್ರಚಾರ ಆಗುವಂತೆ ಕೃಷ್ಣ ದೇವರು ಅನುಗಹಿಸಲಿ ಎಂದು ಪರ್ಯಾಯ ಪತ್ತಿಗೆ ಶ್ರೀಗಳು ಭಾವುಕರಾಗಿ ನುಡಿದರು.


ಕಿರಿಯ ಶ್ರೀಪಾದರಾದ ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರೀಪಾದರು ಉಪಸ್ಥಿತರಿದ್ದ ಈ ಅಪೂರ್ವ ಕ್ಷಣದಲ್ಲಿ ಅನೇಕ ಮಂದಿ ಭಕ್ತರು ಹಾಗೂ ವಿದ್ವಾಂಸರು ಪಾಲ್ಗೊಂಡು ಧನ್ಯರಾದರು.


ಈ ಸುವರ್ಣ ಕವಚ ಕಾರ್ಯವನ್ನು ಅಚ್ಚುಕಟ್ಟಾಗಿ ಮಾಡಿಕೋಟ್ಜ ಖ್ಯಾತ ಕಲಾವಿದ ಶ್ರೀ ಗಂಜೀಫಾ  ರಘುಪತಿ ಭಟ್ ರವರನ್ನು ಈ ಸಂದರ್ಭದಲ್ಲಿ ಅನುಗ್ರಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top