ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಆಂತರಿಕ ಗುಣಮಟ್ಟ ಭರವಸಾ ಕೋಶ, ಡಾ. ಪಾದೂರು ಗುರುರಾಜ್ ಭಟ್ ಮೆಮೋರಿಯಲ್ ಟ್ರಸ್ಟ್, ಉಡುಪಿ ಹಾಗೂ ಇತಿಹಾಸ ವಿಭಾಗ ಸಂಯುಕ್ತವಾಗಿ ಡಾ. ಪಾದೂರು ಗುರುರಾಜ್ ಭಟ್ ಜನ್ಮ ಶತಮಾನೋತ್ಸ 2025 ವಿಶ್ವವಿದ್ಯಾನಿಲಯ ಮಟ್ಟದ ಒಂದು ದಿನದ ವಿಚಾರ ಸಂಕಿರಣವನ್ನು ಕಾಲೇಜಿನಲ್ಲಿ ಏರ್ಪಡಿಸಲಾಗಿತ್ತು.
ಇದರ ಉದ್ಘಾಟನೆಯನ್ನು ಮೂಡುಬಿದಿರೆಯ ಶ್ರೀಧವಳ ಕಾಲೇಜು ನಿವೃತ್ತ ಇತಿಹಾಸ ಪ್ರಾಧ್ಯಾಪಕರಾದ ಡಾ. ಪುಂಡಿಕಾ ಗಣಪಯ್ಯ ಭಟ್ ನೆರವೇರಿಸಿದರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ. ಗಾಂವಕರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಡಾ. ಗುರುರಾಜ್ ಭಟ್ ಮೆಮೋರಿಯಲ್ ಟ್ರಸ್ಟ್ ಉಡುಪಿ ಇದರ ಸದಸ್ಯರಾದ, ಪಿ. ಪರಶುರಾಮ್ ಭಟ್, ರಘುಪತಿ ರಾವ್, ವೆಂಕಟೇಶ್ ಭಟ್ ಹಾಗೂ ಐಕ್ಯೂಎಸಿ ಸಂಚಾಲಕರಾದ ಡಾ. ಮೇವಿ ಮಿರಾಂದ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಗಳಾದ ಡಾ. ರಘು ನಾಯ್ಕ, ಪ್ರಶಾಂತ ಎನ್. ಹಾಗೂ ಇತಿಹಾಸ ವಿಭಾಗ ಉಪನ್ಯಾಸಕರಾದ ಡಾ. ಮಹೇಶ್ ಕುಮಾರ್ ಕೆ.ಈ., ಡಾ. ಮೋಹನ್ ಕೆ.ಎನ್. ಸಂಪನ್ಮೂಲ ವ್ಯಕ್ತಿಗಳಾದ ಡಾ. ರಾಮದಾಸ್ ಪ್ರಭು, ಡಾ. ಬಿ. ಜಗದೀಶ ಶೆಟ್ಟಿ ಉಪಸ್ಥಿತರಿದ್ದರು.
ಈ ವಿಚಾರ ಸಂಕಿರಣದಲ್ಲಿ ಮೊದಲ ಉಪನ್ಯಾಸವನ್ನು ಮೂಡುಬಿದಿರೆಯ ಶ್ರೀಧವಳ ಕಾಲೇಜು ನಿವೃತ್ತ ಇತಿಹಾಸ ಪ್ರಾಧ್ಯಾಪಕರಾದ ಡಾ. ಪುಂಡಿಕಾ ಗಣಪಯ್ಯ ಭಟ್ “ತುಳುನಾಡಿನ ದೇವಾಲಯಗಳ ವಾಸ್ತು ಶಿಲ್ಪ”ಗಳ ಕುರಿತು ಮಾಹಿತಿ ನೀಡಿದರು.
ಎರಡನೇ ಉಪನ್ಯಾಸವನ್ನು ಪೂರ್ಣಪ್ರಜ್ಞಾ ಕಾಲೇಜು ಉಡುಪಿ ಇಲ್ಲಿಯ ನಿವೃತ್ತ ಪ್ರಾಂಶುಪಾಲರು ಹಾಗೂ ಮಾಹೆ ಸಾಂಸ್ಕೃತಿಕ ಕೇಂದ್ರಗಳ ಆಡಳಿತಾಧಿಕಾರಿಗಳಾದ ಡಾ. ಬಿ. ಜಗದೀಶ ಶೆಟ್ಟಿ “ತುಳುನಾಡಿನ ಶಾಸನಗಳು” ಕುರಿತು ಮಾಹಿತಿ ನೀಡಿದರು.
ಮೂರನೇ ಉಪನ್ಯಾಸವನ್ನು ಅಜ್ಜರಕಾಡು ಉಡುಪಿ ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ವಿಭಾಗ ಮುಖ್ಯಸ್ಥರಾದ ಡಾ. ರಾಮದಾಸ ಪ್ರಭು “ಮಧ್ಯಯುಗೀನ ತುಳುನಾಡಿನ ಸ್ಥಳೀಯ ಪ್ರಭುತ್ವಗಳು” ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಇತಿಹಾಸ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡಾ. ಮಹೇಶ್ ಕುಮಾರ್ ಕೆ.ಈ ಸ್ವಾಗತಿಸಿ ಪ್ರಸ್ತಾವಿಸಿದರು. ಡಾ. ಮೋಹನ್ ಕೆ.ಎನ್. ವಂದಿಸಿದರು. ವಿದ್ಯಾರ್ಥಿ ರಾಘವೇಂದ್ರ ಕಾರ್ಯಕ್ರಮ ನಿರೂಪಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ