ಉಜಿರೆ ಎಸ್. ಡಿ. ಎಂ ಕಾಲೇಜು: ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ

Upayuktha
0



ಉಜಿರೆ: ಎಸ್.ಡಿ.ಎಂ ಪದವಿ,  ಪದವಿಪೂರ್ವ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಗಳ ಅಧ್ಯಾಪಕರ ಸಂಘದ ವಾರ್ಷಿಕ ಸ್ನೇಹಕೂಟ ಮತ್ತು ಬೆಳದಿಂಗಳೂಟ ಕಾರ್ಯಕ್ರಮವು ಎ.24 ರಂದು ಪದವಿ ಕಾಲೇಜಿನ ಒಳಾಂಗಣದಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ಶೈಕ್ಷಣಿಕ ವಲಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಅಧ್ಯಾಪಕರನ್ನು ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರು ಅಭಿನಂದಿಸಿದರು. 


ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಪ್ರಾಸ್ತಾವಿಕವಾಗಿ ಮಾತನಾಡಿ, ಗುಣಮಟ್ಟದಿಂದ ಕೂಡಿದ ಸಂಸ್ಕಾರಯುತ ಶಿಕ್ಷಣದಿಂದ ಕಾಲೇಜು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿದೆ. ಅದಕ್ಕೆ ಕಾಲೇಜಿನ ಅಧ್ಯಾಪಕರ ಶ್ರಮ ಅಪಾರವಾಗಿದೆ ಎಂದರು.


ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆ, ಎಸ್.ಡಿ.ಎಂ. ಎಜುಕೇಶನಲ್ ಸೊಸೈಟಿಯ ಕಾರ್ಯದರ್ಶಿಗಳಾದ ಡಿ. ಹರ್ಷೇಂದ್ರ ಕುಮಾರ್, ಡಾ. ಸತೀಶ್ಚಂದ್ರ ಎಸ್.,  ಬೆಂಗಳೂರಿನ ಕ್ಷೇಮವನದ ಸಿಇಒ ಶ್ರದ್ಧಾ ಅಮಿತ್, ಸೋನಿಯಾ ಯಶೋವರ್ಮ, ಅಧ್ಯಾಪಕರ ಸಂಘದ ಕಾರ್ಯದರ್ಶಿ ಡಾ. ಸವಿತಾ ಕುಮಾರಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಮೋದ್ ಕುಮಾರ್ ಉಪಸ್ಥಿತರಿದ್ದರು.


ಅಧ್ಯಾಪಕರು ಮತ್ತು ಅವರ ಕುಟುಂಬದವರಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಕಾಲೇಜಿನ ಒಳಾಂಗಣದಲ್ಲಿ ಬೆಳದಿಂಗಳೂಟವನ್ನು ಮಾಡಲಾಯಿತು. ಪ್ರಾಧ್ಯಾಪಕರಾದ ಅಶ್ವಿತ್ ಮತ್ತು ದಿವಾಕರ ಕೊಕ್ಕಡ ಕಾರ್ಯಕ್ರಮ ನಿರೂಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top