ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಅಂಡ್ ಟೆಕ್ನಾಲಜಿಯ ವಿದ್ಯಾರ್ಥಿಗಳು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ರಾಜ್ಯಮಟ್ಟದ ಅಂತರ್ಕಾಲೇಜು ಸಾಂಸ್ಕೃತಿಕ ಉತ್ಸವದಲ್ಲಿ ಎರಡು ಚಿನ್ನ ಹಾಗೂ ಒಂದು ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.
ಬೆಂಗಳೂರಿನ ಗ್ಲೋಬಲ್ ಅಕಾಡಮಿ ಆಫ್ ಟೆಕ್ನಾಲಜಿಯಲ್ಲಿ ನಡೆದ ಇಂಟರ‍್ಯಾಕ್ಟ್-2025 ಸ್ಪರ್ಧೆಯಲ್ಲಿ ಕಾಲೇಜಿನ ಭೂಮಿಕಾ ಕಲಾ ಸಂಘ ತಂಡವು ಪ್ರತಿಭೆಯನ್ನು ಪ್ರದರ್ಶಿಸಿ ವಿಶೇಷ ಸಾಧನೆಯನ್ನು ಮಾಡಿದೆ.
ಸುಮಾರು 100ಕ್ಕೂ ಹೆಚ್ಚು ಎಂಜಿನಿಯರಿಂಗ್ ಕಾಲೇಜುಗಳ ಕಲಾ ತಂಡಗಳು ಭಾಗವಹಿಸಿದ್ದು, ಕಾಲೇಜಿನಿಂದ 34 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ವ್ಯಂಗ್ಯಚಿತ್ರ ವಿಭಾಗದಲ್ಲಿ ದ್ವಿತೀಯ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಮನ್ನಿತ್ ಗೌಡ ಇವರು ಚಿನ್ನದ ಪದಕ, ಸ್ವರ ವಾದ್ಯ ಸ್ಪರ್ಧೆಯಲ್ಲಿ ಪ್ರಥಮ ವರ್ಷದ ಕಂಪ್ಯೂಟರ್ ಸೈನ್ಸ್ ವಿಭಾಗದ ತನ್ಮಯಿ ಉಪ್ಪಂಗಳ ಇವರು ಚಿನ್ನದ ಪದಕ ಹಾಗೂ ಶಾಸ್ತ್ರೀಯ ಸಂಗೀತ ಹಾಡುಗಾರಿಕೆ ವಿಭಾಗದಲ್ಲಿ ದ್ವಿತೀಯ ವರ್ಷದ ಎಐಎಂಎಲ್ ವಿಭಾಗದ ಕಾರ್ತಿಕ ಶ್ಯಾಮ ಇವರು ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ.
ಕಾಲೇಜಿನ ಸಾಂಸ್ಕೃತಿಕ ವೇದಿಕೆ ಭೂಮಿಕಾ ಕಲಾ ಸಂಘದ ನಿರ್ದೇಶಕ ಪ್ರೊ.ಸುದರ್ಶನ್.ಎಂ.ಎಲ್ ಹಾಗೂ ಸಹನಿರ್ದೇಶಕಿ ಡಾ.ಶ್ವೇತಾಂಬಿಕಾ ಅವರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ಈ ಸಾಧನೆಯನ್ನು ಮಾಡಿದ್ದಾರೆ ಎಂದು ಪ್ರಾಂಶುಪಾಲ ಡಾ.ಮಹೇಶ್‌ಪ್ರಸನ್ನ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ