ರಾಜ್ಯಸಭೆಯಲ್ಲೂ ಅಂಗೀಕಾರ ಪಡೆದ ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆ

Upayuktha
0

ಹೊಸದಿಲ್ಲಿ: ಬಿಜೆಪಿ ನೇತೃತ್ವ ಎನ್‌ಡಿಎ ಸರ್ಕಾರ ಲೋಕಸಭೆಯಲ್ಲಿ 1995ರ ವಕ್ಫ್‌ ಕಾಯ್ದೆ ತಿದ್ದುಪಡಿ ಮಸೂದೆಗೆ ಅಂಗೀಕಾರ ಪಡೆದುಕೊಂಡ ಬಳಿಕ ಶುಕ್ರವಾರ ನಸುಕಿನಲ್ಲಿ ರಾಜ್ಯಸಭೆಯಲ್ಲೂ ಅಂಗೀಕಾರಗೊಂಡಿದೆ. ಮಸೂದೆ ಪರ 128, ವಿರುದ್ಧ 95 ಮತಗಳು ಲಭಿಸಿವೆ.


ರಾಜ್ಯಸಭೆಯಲ್ಲಿ ಮಸೂದೆಯ ಪರ-ವಿರೋಧ ಚರ್ಚೆಗಳು ಜೋರಾಗಿ ನಡೆದಿದ್ದು, ಆಡಳಿತಾರೂಢ ಎನ್‌ಡಿಎ ಸದಸ್ಯರು ಮಸೂದೆ ಪರವಾಗಿ ಮತ್ತು ಪ್ರತಿಪಕ್ಷ ಸದಸ್ಯರು ಮಸೂದೆ ವಿರುದ್ಧವಾಗಿ ಅಭಿಪ್ರಾಯ ಮಂಡಿಸಿದ್ದರು.


ವಕ್ಫ್ ತಿದ್ದುಪಡಿ ಮಸೂದೆ-2025ನ್ನು ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಗುರುವಾರ ಮಂಡಿಸಿದ್ದರು. ಈ ಮಸೂದೆಯನ್ನು ಸಂಸತ್ತಿನಲ್ಲಿ ಮಂಡಿಸುವ ಮೊದಲು ರಾಜ್ಯ ಸರ್ಕಾರಗಳು, ಅಲ್ಪಸಂಖ್ಯಾತ ಆಯೋಗಗಳು ಮತ್ತು ವಕ್ಫ್ ಮಂಡಳಿಗಳೊಂದಿಗೆ ಸಮಾಲೋಚಿಸಿರುವುದಾಗಿ ಹೇಳಿದ್ದರು.


ಮಸೂದೆಯು ಮುಸ್ಲಿಂ ಹಿತಾಸಕ್ತಿಗಳಿಗೆ ಹಾನಿ ಮಾಡುತ್ತದೆ ಎಂಬ ಆರೋಪಗಳನ್ನು ತಳ್ಳಿಹಾಕಿದ ರಿಜಿಜು, ಮುಸ್ಲಿಮೇತರರು ವಕ್ಫ್ ಮಂಡಳಿಯ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ. ಏಕೆಂದರೆ ಅದರ ನಿರ್ವಹಣೆ ಮತ್ತು ಫಲಾನುಭವಿಗಳು ಪ್ರತ್ಯೇಕ ವಾಗಿ ಮುಸ್ಲಿಮರಾಗಿಯೇ ಉಳಿಯುತ್ತಾರೆ ಎಂದು ಹೇಳಿದ್ದರು. 


ಮಸೂದೆಯನ್ನು ಪ್ರತಿಷ್ಠೆಯ ವಿಷಯವನ್ನಾಗಿ ಮಾಡಬಾರದು, ಸರ್ಕಾರ ಮಾಡುತ್ತಿರುವುದು ಒಳ್ಳೆಯದಲ್ಲ. ಇದು ದೇಶದಲ್ಲಿ ವಿವಾದಗಳಿಗೆ ಕಾರಣವಾಗುತ್ತದೆ. ವಿವಾದಗಳಿಗೆ ಬೀಜ ಬಿತ್ತುತ್ತಿದ್ದೀರಿ, ಇದನ್ನು ಹಿಂತೆಗೆದುಕೊಳ್ಳುವಂತೆ ನಾನು ಗೃಹ ಸಚಿವರಲ್ಲಿ ಮನವಿ ಮಾಡುತ್ತೇನೆ ಎಂದು ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಹೇಳಿದರು. 


ರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top