ನಾಳೆ ರೆಡ್ ಕ್ರಾಸ್ ಸೊಸೈಟಿಯಿಂದ ವಿಶ್ವ ಆರೋಗ್ಯ ದಿನಾಚರಣೆ

Upayuktha
0




ಮಂಗಳೂರು: ಇಂಡಿಯನ್ ರೆಡ್ ಕ್ರಾಸ್  ಸೊಸೈಟಿಯ ದ.ಕ.ಜಿಲ್ಲಾ ಘಟಕ, ಯೂತ್ ರೆಡ್ ಕ್ರಾಸ್  ಘಟಕ ಮಂಗಳೂರು ವಿ.ವಿ., ಯನೆಪೋಯ ಪರಿಗಣಿತ ವಿ.ವಿ. ಮತ್ತು ವಿ.ವಿ.ಕಾಲೇಜು ವತಿಯಿಂದ ವಿಶ್ವ ಆರೋಗ್ಯ ದಿನಾಚರಣೆ ಏ.7 ರಂದು ಬೆಳಗ್ಗೆ 9 ಕ್ಕೆ ನಗರದ ವಿ.ವಿ.ಕಾಲೇಜಿನ ರವೀಂದ್ರ ಕಲಾ ಭವನದಲ್ಲಿ  ನಡೆಯಲಿದೆ.


ರೆಡ್ ಕ್ರಾಸ್ ದ.ಕ.ಜಿಲ್ಲಾ ಸಮಿತಿಯ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ವಿ.ವಿ.ಕಾಲೇಜಿನ ಪ್ರಾಂಶುಪಾಲ ಪ್ರೊ.ಗಣಪತಿ ಗೌಡ ಅಧ್ಯಕ್ಷತೆ ವಹಿಸಲಿದ್ದಾರೆ.


ರೆಡ್ ಕ್ರಾಸ್ ಆರೋಗ್ಯ ಮತ್ತು ಪ್ರಥಮ ಚಿಕಿತ್ಸೆ ಉಪ ಸಮಿತಿ ಚೇರ್ಮನ್ ಡಾ.ಸಚ್ಚಿದಾನಂದ ರೈ, ಉಪಾಧ್ಯಕ್ಷ ಡಾ.ಸತೀಶ್ ರಾವ್, ಕಾರ್ಯದರ್ಶಿ ಕಿಶೋರ್ ಚಂದ್ರ ಹೆಗ್ಡೆ, ನಿರ್ದೇಶಕ ರಾದ ಡಾ.ಸುಮನ .ಬಿ., ಸಚೇತ್ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.


ಯೇನೆಪೊಯ ಮೆಡಿಕಲ್ ಕಾಲೇಜಿನ ಅಸೋಸಿಯೇಟ್ ಪ್ರೊಫೆಸರ್ ಶ್ವೇತಾ ಪ್ರಭು ಮತ್ತು ಪ್ರತೀಕ್ಷಾ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ. ಮಂಗಳೂರು ವಿ.ವಿ.ಯ ಯೂತ್ ರೆಡ್ ಕ್ರಾಸ್ ನೋಡಲ್ ಅಧಿಕಾರಿ ಡಾ.ಗಾಯತ್ರಿ.ಎನ್., ಯೇನೆಪೊಯ ವಿ.ವಿ.ಯ ನೋಡಲ್ ಅಧಿಕಾರಿ ನಿತ್ಯಶ್ರೀ.ಬಿ.ವಿ. ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top