ಮಂಗಳೂರು: ವಿದ್ಯಾರ್ಥಿಗಳು ಲಭಿಸುವ ಅವಕಾಶಗಳನ್ನು ಸದ್ಬಳಕೆ ಮಾಡಿಕೊಂಡು ತಮ್ಮ ಪ್ರತಿಭೆಗಳನ್ನು ಪ್ರದರ್ಶಿಸಬೇಕು. ಪಾಠ ಪ್ರವಚನಗಳೊಂದಿಗೆ ಕಲಾ ಚಟುವಟಿಕೆಗಳು ಸಹ ವಿದ್ಯಾರ್ಥಿ ಜೀವನದ ಪ್ರಮುಖ ಭಾಗವಾಗಿದೆ. ಸ್ಪರ್ಧಾ ಮನೋಭಾವ ವನ್ನು ಮೂಡಿಸಿಕೊಂಡು ವಿದ್ಯಾರ್ಥಿಗಳು ಕ್ರಿಯಶೀಲರಾಗಿರಬೇಕು. ವಿದ್ಯಾರ್ಥಿಗಳೇ ಸ್ಪರ್ಧೆಗಳನ್ನು ಆಯೋಜಿಸುತ್ತಿರುವುದು ಉತ್ತಮ ನಾಯಕತ್ವದ ಗುಣಗಳನ್ನು ರೂಢಿಸಿಕೊಳ್ಳಲು ಸಹಕಾರಿಯಗುತ್ತದೆ ಎಂದು ಮಂಗಳ ರಿಸೋರ್ಸ್ ಮ್ಯಾನೇಜ್‌ಮೆಂಟ್‌ನ ನಿರ್ದೇಶಕ ರಂಜನ್ ಬೆಳ್ಳರ್ಪಾಡಿ ಹೇಳಿದರು.
ಅವರು ಹಿಂದು ವಿದ್ಯಾದಾಯಿನೀ ಸಂಘ ಸುರತ್ಕಲ್‌ನ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜು, ಸುರತ್ಕಲ್‌ನ ಕಲಾಬ್ಧಿ ಮತ್ತು ವಿದ್ಯಾರ್ಥಿ ಸೆನೆಟ್ ಆಯೋಜಿಸಿದ್ದ ಅಂತರ್ ಕಾಲೇಜು ಸ್ಪರ್ಧೆ ದಿಗಂತ – 2025ನ್ನು ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿಂದು ವಿದ್ಯಾದಾಯಿನೀ ಸಂಘದ ಅಧ್ಯಕ್ಷ ಹೆಚ್. ಜಯಚಂದ್ರ ಹತ್ವಾರ್ ಮಾತನಾಡಿ, ಕಲಿಕೆಯೊಂದಿಗೆ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ಅಗ್ರಶ್ರೇಣಿಯಲ್ಲಿರುವ ಗೋವಿಂದ ದಾಸ ಕಾಲೇಜಿನ ವಿದ್ಯಾರ್ಥಿಗಳು ನಿರಂತರವಾಗಿ ದಿಗಂತ ಸ್ಪರ್ಧೆಯನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.
ಕಾಲೇಜಿನ ಆಡಳಿತಾತ್ಮಕ ನಿರ್ದೇಶಕ ಪ್ರೊ. ಗೋಪಾಲ ಎಂ. ಗೋಖಲೆ ಶುಭ ಹಾರೈಸಿದರು. ಕಾಲೇಜಿನ ಪ್ರಾಚಾರ್ಯ ಪ್ರೊ. ಹರೀಶ ಆಚಾರ್ಯ ಪಿ. ವಿದ್ಯಾರ್ಥಿಗಳ ಸೃಜನಶೀಲ
ಚಟುವಟಿಕೆಗಳಿಗೆ ಕಾಲೇಜು ಸದಾ ಪ್ರೋತ್ಸಾಹ ನೀಡುತ್ತಿದ್ದು ಪದವಿಯೊಂದಿಗೆ ಕೌಶಲ್ಯಗಳನ್ನು ಪಡೆದುಕೊಳ್ಳುವ ಅವಕಾಶಗಳನ್ನು ನೀಡುತ್ತಿದೆ ಎಂದರು.
ವಿದ್ಯಾರ್ಥಿ ಸಂಯೋಜಕ ಭರತ್ ಸ್ವಾಗತಿಸಿದರು. ಹಿತಾ ಉಮೇಶ್ ಕಾರ್ಯಕ್ರಮ ನಿರೂಪಿಸಿದರು. ಸ್ವಾತಿ ಧನ್ಯವಾದ ಸಮರ್ಪಿಸಿದರು.ಉಪ ಪ್ರಾಂಶುಪಾಲ ಪ್ರೊ. ನೀಲಪ್ಪ ವಿ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸೌಮ್ಯ ಪ್ರವೀಣ್ ಕೆ, ವಾಣಿಜ್ಯ ವಿಭಾಗದ ಡೀನ್ ಮತ್ತು ಸ್ನಾತಕೋತ್ತರ ವಾಣಿಜ್ಯ ವಿಭಾಗದ ಸಂಯೋಜಕ ಡಾ. ಗಣೇಶ ಆಚಾರ್ಯ ಬಿ., ಸ್ನಾತಕೋತ್ತರ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕಾರ್ತಿಕ್ ಜೆ.ಎಸ್. ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥ ವಾಮನ ಕಾಮತ್, ಸ್ಟಾಫ್ ಸೆಕ್ರಟರಿ ಗೀತಾ ಕೆ. ಮತ್ತಿತರರು ಉಪಸ್ಥಿತರಿದ್ದರು.
ಸುರತ್ಕಲ್ ಅರಕ್ಷಕ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಮಾತನಾಡಿ, ದೇಶದ ಆಸ್ತಿಯಾದ ಸುಶಿಕ್ಷಿತ ಯುವ ಜನತೆ ಉತ್ತಮ ಸಮಾಜವನ್ನು ನಿರ್ಮಿಸುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಗೋವಿಂದ ದಾಸ ಕಾಲೇಜು ಅಲ್ಯುಮ್ನಿ ಅಸೋಸಿಯೇಶನ್‌ನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಗೋವಿಂದ ದಾಸ ಕಾಲೇಜಿನ ಎಲ್ಲಾ ಚಟುವಟಿಕೆಗಳಿಗೆ ಅಲ್ಯಮ್ನಿ ಅಸೋಸಿಯೇಶನ್ ಸದಾ ಪ್ರೋತ್ಸಾಹ ನೀಡುತ್ತಿದೆ ಎಂದರು.
ಹದಿನೆಂಟು ಸ್ಪರ್ಧಾ ವಿಭಾಗಗಳಲ್ಲಿ ಹತ್ತೊಂಬತ್ತು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಂಗಳೂರಿನ ಕೆನರಾ ಕಾಲೇಜಿನ ವಿದ್ಯಾರ್ಥಿಗಳು ಸಮಗ್ರ ಪ್ರಶಸ್ತಿ ಮತ್ತು ಎಸ್.ಡಿ.ಎಂ. ಕಾಲೇಜು ಮಂಗಳೂರಿನ ವಿದ್ಯಾರ್ಥಿಗಳು ದ್ವಿತೀಯ ಸಮಗ್ರ ಪ್ರಶಸ್ತಿಗಳನ್ನು ಪಡೆದುಕೊಂಡರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ