ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ ಪ್ರವೇಶಾತಿ : ಅರ್ಜಿ ಆಹ್ವಾನ

Upayuktha
0


ಉಡುಪಿ:  ಮೈಸೂರು ವಿಶ್ವವಿದ್ಯಾನಿಲಯಕ್ಕೆ ಸಂಯೋಜನೆಗೊಂಡಿರುವ ಚಾಮರಾಜೇಂದ್ರ ಸರ್ಕಾರಿ ದೃಶ್ಯಕಲಾ ಕಾಲೇಜು (ಕಾವಾ), ಸಿದ್ದಾರ್ಥನಗರ, ಮೈಸೂರು ಸಂಸ್ಥೆಯಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿಗೆ ದೃಶ್ಯಕಲೆಯಲ್ಲಿ ಬ್ಯಾಚುಲರ್ ಆಫ್ ವಿಜ್ಯುಯಲ್ ಆರ್ಟ್ಸ್ (ಬಿ.ವಿ.ಎ-ನಾಲ್ಕು ವರ್ಷದ ಎಂಟು ಸೆಮಿಸ್ಟರ್ ಎನ್.ಇ.ಪಿ. ಪದ್ದತಿ) ಪ್ರಥಮ ಬಿ.ವಿ.ಎ. ಪದವಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.


ಸದರಿ ಪದವಿಯಲ್ಲಿ 3 ನೇ ಸೆಮಿಸ್ಟರ್‌ನಿಂದ ಚಿತ್ರಕಲೆ, ಶಿಲ್ಪಕಲೆ, ಗ್ರಾಫಿಕ್ಸ್ ಕಲೆ (ಅಚ್ಚುಕಲೆ), ಅನ್ವಯಕಲೆ, ಕಲಾ ಇತಿಹಾಸ ಹಾಗೂ ಛಾಯಾಚಿತ್ರ ಮತ್ತು ಛಾಯಾಚಿತ್ರ ಪತ್ರಿಕೋದ್ಯಮ ವಿಭಾಗಳಲ್ಲಿ ವಿಶೇಷ ಅಧ್ಯಯನದ ಸ್ನಾತಕ ಪದವಿಯಾಗಿರುತ್ತದೆ.


ಆಸಕ್ತ ಅಭ್ಯರ್ಥಿಗಳು ರಾಜ್ಯ ಸರ್ಕಾರದ ವೆಬ್‌ಸೈಟ್  htts://uucms.karnataka.gov.in , https://www.cavamysore.karnataka.gov.in  ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶಾತಿಗಾಗಿ ಅರ್ಹತಾ ಪರೀಕ್ಷೆಯ ದಿನಾಂಕ ಮತ್ತು ಇತರೆ ಮಾಹಿತಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯದ ಸಹಾಯವಾಣಿ ಸಂಖ್ಯೆ: 0821-2438931 ಅನ್ನು ಕಛೇರಿ ಸಮಯದಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top