ಜಿಲ್ಲಾಧಿಕಾರಿಗಳು ಏಪ್ರಿಲ್ 22 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನಾಮಪತ್ರಗಳನ್ನು ಸಲ್ಲಿಸಲು ಏಪ್ರಿಲ್ 28 ಕೊನೆಯ ದಿನ. ಏ. 29 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಮೇ 2 ಉಮೇದುವಾರಿಕೆ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ಮೇ 11 ರಂದು ಬೆಳಗ್ಗೆ 7 ರಿಂದ ಸಂಜೆ 5 ರ ವರೆಗೆ ಮತದಾನ ನಡೆಯಲಿದ್ದು, ಮೇ 14 ರಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ಗಂಟೆಯಿಂದ ಮತಗಳ ಎಣಿಕೆ ಕಾರ್ಯಗಳು ನಡೆಯಲಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 308 ಎಸಿ ರಂತೆ ಚುನಾವಣಾ ನೀತಿ ಸಂಹಿತೆಯು ಚುನಾವಣೆ ನಡೆಯುವ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಏಪ್ರಿಲ್ 22 ರಿಂದ ಮೇ 14 ರ ವರೆಗೆ ಜಾರಿಯಲ್ಲಿರಲಿದೆ ಎಂದು ರಾಜ್ಯ ಚುನಾವಣಾ ಆಯೋಗದ ಕಚೇರಿ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ