1971ರ ನಂತರ ಮೊದಲ ಬಾರಿ ದೇಶಾದ್ಯಂತ ನಾಳೆ ರಕ್ಷಣಾ ಕವಾಯತು

Upayuktha
0

ನವೆಹಲಿ: ದೇಶಾದ್ಯಂತ ನಾಳೆ (ಮೇ 7ರಂದು) ರಕ್ಷಣಾ ಕಾರ್ಯದ ಅಣಕು ಕವಾಯತು ನಡೆಸುವಂತೆ ಕೇಂದ್ರ ಗೃಹ ಸಚಿವಾಲಯ ಎಲ್ಲ ರಾಜ್ಯಗಳಿಗೂ ಸೂಚನೆ ನೀಡಿದೆ. ನಾಗರಿಕರ ರಕ್ಷಣೆಯ ಸಂಬಂಧ ಮೇ 7ರಂದು ದೇಶಾದ್ಯಂತ ಅಣಕು ಪ್ರದರ್ಶನ ನಡೆಸ ಬೇಕು. ಎಲ್ಲಾ ರಾಜ್ಯಗಳಲ್ಲಿ ವಾಯುದಾಳಿಯ ಸೈರನ್‌ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು ಎಂದು  ಗೃಹ ಸಚಿವಾಲಯ ನೀಡಿರುವ ಆದೇಶದಲ್ಲಿ ಹೇಳಿದೆ. ಈ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳಲ್ಲೂ ಯುದ್ಧದ ಸಮಯದಲ್ಲಿ ನಡೆಸಲಾಗುವ ರಕ್ಷಣಾ ಕಾರ್ಯದ ಅಣಕು ಕವಾಯತು ನಾಳೆ ನಡೆಯಲಿದೆ.

ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಬಳಿಕ ಪಾಕಿಸ್ತಾನ ಮತ್ತು ಭಾರತದ ನಡುವೆ ಉದ್ವಿಗ್ನತೆ ತೀವ್ರಗೊಂಡಿದ್ದು, ಯುದ್ಧದ ಹಂತಕ್ಕೆ ಮುಟ್ಟುವಸಾಧ್ಯತೆ ಹೆಚ್ಚುತ್ತಿರುವ ಲಕ್ಷಣಗಳು ಗೋಚರಿಸುತ್ತಿವೆ. ಹೀಗಾಗಿ ಎರಡೂ ದೇಶಗಳು ಯುದ್ಧೋಪಕ ರಣಗಳ ತಾಲೀಮು ನಡೆಸಿ ಬಲಾಬಲ ಪ್ರದರ್ಶಿಸುತ್ತಿವೆ. ಪ್ರತಿಕೂಲ ದಾಳಿಯ ಸಂದರ್ಭದಲ್ಲಿ ಸಿದ್ಧತೆಯನ್ನು ಪರೀಕ್ಷಿಸಲು ಮತ್ತು ಸಾರ್ವಜನಿಕ ಜಾಗೃತಿಯನ್ನು ಹೆಚ್ಚಿಸಲು ಮೇ 7ರ ಬುಧವಾರ ಸಮಗ್ರ ನಾಗರಿಕ ರಕ್ಷಣಾ ಅಣಕು ಕಸರತ್ತುಗಳನ್ನು ನಡೆಸುವಂತೆ ಗೃಹ ಸಚಿವಾಲಯ ರಾಜ್ಯಗಳಿಗೆ ನಿರ್ದೇಶನ ನೀಡಿದೆ. 

ವಾಯುದಾಳಿ ಎಚ್ಚರಿಕೆ ಸೈರನ್‌ಗಳ ಕಾರ್ಯಾಚರಣೆ ಮತ್ತು ವಿದ್ಯಾರ್ಥಿಗಳು ಸೇರಿದಂತೆ ನಾಗರಿಕರಿಗೆ ಅಗತ್ಯ ನಾಗರಿಕ ರಕ್ಷಣಾ ತಂತ್ರಗಳಲ್ಲಿ ತರಬೇತಿಯು ಈ ಕವಾಯತಿನಲ್ಲಿ ಸೇರಿವೆ. ವೈಮಾನಿಕ ದಾಳಿಗಳು ಅಥವಾ ತುರ್ತು ಸಂದರ್ಭಗಳಲ್ಲಿ ಸ್ವಯಂ ರಕ್ಷಣೆ ಮಾಡಿಕೊಳ್ಳುವ ಬಗ್ಗೆ ನಾಗರಿಕರನ್ನು ಸಜ್ಜುಗೊಳಿಸುವುದು ಇದರ ಗುರಿಯಾಗಿದೆ. ರಾಷ್ಟ್ರವ್ಯಾಪಿ ಕವಾಯತನ್ನು ಯಶಸ್ವಿ ಗೊಳಿಸುವಲ್ಲಿ ಸ್ಥಳೀಯ ಅಧಿಕಾರಿಗಳು, ಶಿಕ್ಷಣ ಸಂಸ್ಥೆಗಳು ಮತ್ತು ನಾಗರಿಕ ರಕ್ಷಣಾ ಸಿಬ್ಬಂದಿಯ ಸಂಘಟಿತ ಭಾಗವಹಿಸುವಿಕೆ ಮಹತ್ವ ಪಡೆದಿದೆ ಎಂದು ಗೃಹ ಸಚಿವಾಲಯ ಹೇಳಿದೆ. ಇದೇ ರೀತಿಯ ರಕ್ಷಣಾ ಕವಾಯತು 1971ರಲ್ಲಿ ನಡೆದಿತ್ತು, ಆಗ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧವೂ ಆಗಿತ್ತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top