ಕಲಾಕುಂಚದಿಂದ “ಕರ್ನಾಟಕ ಸಿರಿಗನ್ನಡ ಸಿರಿ” ಪ್ರಶಸ್ತಿಗೆ ಆಹ್ವಾನ

Chandrashekhara Kulamarva
0



ದಾವಣಗೆರೆ: ದಾವಣಗೆರೆಯ ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಆಶ್ರಯದಲ್ಲಿ 70ನೇ ವರ್ಷದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಶಿಕ್ಷಣ ಸೇರಿದಂತೆ, ಕಲೆ, ಸಾಹಿತ್ಯ, ಸಂಗೀತ, ಸಮಾಜ ಸೇವೆಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ “ಕರ್ನಾಟಕ ಸಿರಿಗನ್ನಡ ಸಿರಿ” ರಾಜ್ಯ ಪ್ರಶಸ್ತಿಗೆ ಆಹ್ವಾನಿಸಲಾಗಿದೆ ಎಂದು ಸಂಸ್ಥೆಯ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಈ ರಾಜ್ಯ ಪ್ರಶಸ್ತಿಗೆ ಆಯ್ಕೆಯಾದವರನ್ನು ಸಮಾರಂಭದ ಪ್ರತ್ಯೇಕ ವೇದಿಕೆಯಲ್ಲಿ ಕಲಾಕುಂಚದ ಮುತ್ತೈದೆಯರು ಕನ್ನಡ ತಿಲಕ ವಿಟ್ಟು, ಕನ್ನಡ ಕಂಕಣ ಕಟ್ಟಿ, ಕನ್ನಡಾರತಿ ಬೆಳಗಿ, ಪುಷ್ಪವೃಷ್ಠಿಯೊಂದಿಗೆ ಗೌರವಿಸುತ್ತಾರೆ. ನಂತರ ಅವರದೇ ಭಾವಚಿತ್ರವಿರುವ ಸನ್ಮಾನ ಪತ್ರ, ಕನ್ನಡ ಪೇಟದೊಂದಿಗೆ ಹಾರ, ಶಾಲು, ಕನ್ನಡತಾಯಿ ಭುವನೇಶ್ವರಿಯ ಸ್ಮರಣಿಕೆ ಚಿನ್ನದ ಲೇಪನದ ಪದಕ ಕೊರಳಿಗೆ ಹಾಕಿ ಸನ್ಮಾನಿಸಲಾಗುವುದು  ಎಂದು ಸಂಸ್ಥೆಯ ಅಧ್ಯಕ್ಷರಾದ ಕೆ.ಹೆಚ್.ಮಂಜುನಾಥ್ ಪ್ರಕಟಿಸಿದ್ದಾರೆ.


ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಹೆಚ್ಚಿನ ಮಾಹಿತಿಗೆ 9538732777 ಈ ವ್ಯಾಟ್ಸಪ್ ಸಂಖ್ಯೆ ಸಂಪರ್ಕಿಸಬಹುದು ಎಂದು ಕಲಾಕುಂಚ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ಉಮೇಶ್ ವಿನಂತಿಸಿದ್ದಾರೆ.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top