ಮಂಗಳೂರು: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮಿಷನ್ ಶಕ್ತಿ ಯೋಜನೆಯ ಸಾಮಥ್ರ್ಯ ಉಪಯೋಜನೆಯ ಪಾಲನಾ ಉಪಯೋಜನೆಯಡಿ ಅಂಗನವಾಡಿ ಸಹಾಯಕಿ-4 ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕಿಯರ ಹುದ್ದೆಗೆ ರೂ.3000 ಗೌರವಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನ. ಅಂಗನವಾಡಿ ಸಹಾಯಕಿ ಹುದ್ದೆಗೆ ಕರ್ನಾಟಕ ರಾಜ್ಯದ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ 10 ನೇ ತರಗತಿ ಪರೀಕ್ಷೆ/ 7ನೇ ತರಗತಿಯಲ್ಲಿ ಪಾಸಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು. ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಆಯಾ ವ್ಯಾಪ್ತಿಯ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಛೇರಿ ಮಂಗಳೂರು ಗ್ರಾಮಾಂತರ:9620636888, ಪುತ್ತೂರು:08251-298788, ವಿಟ್ಲ:08255-238080, ಇವರನ್ನು ಕಛೇರಿ ಅವಧಿಯಲ್ಲಿ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ