ಮಂಗಳೂರು: ಅಸ್ಸಾಂ ಸಾರ್ವಜನಿಕ ಸೇವಾ ಆಯೋಗ ಮೀನುಗಾರಿಕಾ ಇಲಾಖೆಯಲ್ಲಿ 32 ಜೂನಿಯರ್ ಎಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.
ಎಐಸಿಟಿಇ ಮಾನ್ಯತೆ ಪಡೆದ ಸಂಸ್ಥೆಯಿಂದ ಸಿವಿಲ್ ಎಂಜಿನಿಯರಿಂಗ್ ಡಿಪ್ಲೊಮಾ ಪಡೆದವರು ಮೇ 3 ರಿಂದ ಜೂನ್ 2 ರವರೆಗೆ apsc.nic.in ನಲ್ಲಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಯೋಮಿತಿ 18-40 ವರ್ಷ. ಅರ್ಜಿ ಶುಲ್ಕವನ್ನು ಸಲ್ಲಿಸಲು ಕೊನೆಯ ದಿನಾಂಕ ಜೂನ್ 4.
ಸಾಮಾನ್ಯ ವರ್ಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು 297.20 ರೂ., ಒಬಿಸಿ/ಎಂಒಬಿಸಿ ಮತ್ತು ಎಸ್‌ಸಿ/ಎಸ್‌ಟಿ/ಬಿಪಿಎಲ್/ಪಿಡಬ್ಲ್ಯೂಬಿಡಿ ವರ್ಗದ ಅಭ್ಯರ್ಥಿಗಳು ಕ್ರಮವಾಗಿ ರೂ 197.20 ಮತ್ತು ರೂ 47.20 ಶುಲ್ಕ ಪಾವತಿಸಬೇಕಾಗುತ್ತದೆ.
ಅಭ್ಯರ್ಥಿಗಳು ಅಧಿಕೃತ ಸೈಟ್ apsc.nic.in ಗೆ ಭೇಟಿ ನೀಡಿ ಮುಖಪುಟದಲ್ಲಿ ನೀಡಲಾದ ಅಪ್ಲಿಕೇಶನ್ ಲಿಂಕ್ ಅನ್ನು ಕ್ಲಿಕ್ ಮಾಡಬೇಕು. ನಂತರ ನೋಂದಾಯಿಸಿಕೊಂಡು ಲಾಗಿನ್ ಆಗಿ ಅರ್ಜಿ ನಮೂನೆಯನ್ನು ಭರ್ತಿ ಮಾಡಬೇಕು. ಅರ್ಜಿ ನಮೂನೆ ಯನ್ನು ಪರಿಶೀಲಿಸಿ ಮತ್ತು ಶುಲ್ಕವನ್ನು ಪಾವತಿಸಬೇಕು. ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಬೇಕು.
ರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ