ಬಾಳ್ತಿಲ ಗ್ರಾಮ ಪಂಚಾಯತ್ ಉಪ ಚುನಾವಣೆಯಲ್ಲಿ ಬಿಜೆಪಿಗೆ ಜಯ

Upayuktha
0


ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಾಳ್ತಿಲ ಗ್ರಾಮ ಪಂಚಾಯತ್ ಗೆ ಉಪ ಚುನಾವಣೆ ನಡೆದಿದ್ದು, ಬಿಜೆಪಿ ಬೆಂಬಲಿತ ಅಭ್ಯರ್ಥಿ ನಿತಿನ್ ಕುಮಾರ್ ಗೆ 419 ಮತ, ಕಾಂಗ್ರೆಸ್ ನ ಯೋಗೀಶ್ ಗೆ 187 ಮತಗಳು ಬಿದ್ದಿವೆ. 5 ಮತ ಅಸಿಂಧುವಾಗಿದೆ. ನಿತಿನ್ ಕುಮಾರ್ ಗೆ 232 ಮತಗಳ ಅಂತರದ ಜಯ ದೊರೆತಿದೆ.


ಬಂಟ್ವಾಳ ಮಂಡಲ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್ ರವರ ಬೂತ್ ನಲ್ಲೇ ನಡೆದ ಈ ಉಪ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ದೊರೆತಿರುವುದು, ಗ್ರಾಮ ಪಂಚಾಯತ್ ನಲ್ಲಿ ಎಲ್ಲಾ 16 ಬಿಜೆಪಿ ಸದಸ್ಯರು ಆಯ್ಕೆಯಾಗಿರುವುದು ವಿಶೇಷ.


ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಅಣ್ಣು ಪೂಜಾರಿಯವರ ನಿಧನದಿಂದ ತೆರವಾದ ಸ್ಥಾನಕ್ಕೆ ಈ ಉಪ ಚುನಾವಣೆ ನಡೆದಿತ್ತು.

ಮುಂದಿನ ಆರು ತಿಂಗಳ ಅವಧಿಗೆ ಈ ಸದಸ್ಯ ಸ್ಥಾನ ಇರಲಿದೆ.ನಂತರ ಗ್ರಾಮ ಪಂಚಾಯತ್ ಗಳಿಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top