ಹಿರಿಯ ಯಕ್ಷಗಾನ ಕಲಾವಿದ ವಿಷ್ಣುಶರ್ಮ ವಾಟೆಪಡ್ಪು, ಚಂದ್ರಹಾಸ ತುಂಬೆ ಇವರಿಗೆ ಸನ್ಮಾನ

Upayuktha
0


ಬಂಟ್ವಾಳ: ಹಿರಿಯ ಯಕ್ಷಗಾನ ಕಲಾವಿದ ಕೀರ್ತಿಶೇಷ ಪುಳಿಂಚ ರಾಮಯ್ಯ ಶೆಟ್ಟಿಯವರ ಸುಪುತ್ರ ಶ್ರೀಧರ ಶೆಟ್ಟಿ ಪುಳಿಂಚ ಇವರ ಸೇವಾ ರೂಪವಾಗಿ ಮೇ 23ರಂದು ಶುಕ್ರವಾರ ಬಾಳ್ತಿಲ ಗ್ರಾಮದ ಚೆಂಡೆ ಶ್ರೀ ಕಲ್ಲುರ್ಟಿ ದೇವಸ್ಥಾನದ ವಠಾರದಲ್ಲಿ ಶ್ರೀ ಕಟೀಲು ಮೇಳದ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟದ ಸಂದರ್ಭದಲ್ಲಿ ಹಿರಿಯ ಯಕ್ಷಗಾನ ಕಲಾವಿದ ವಿಷ್ಣುಶರ್ಮ ವಾಟೆಪಡ್ಪು ಹಾಗೂ ಚಂದ್ರಹಾಸ ತುಂಬೆ ಇವರನ್ನು ಗಣ್ಯ ಅತಿಥಿಗಳ ಸಮಕ್ಷಮದಲ್ಲಿ ಗೌರವಿಸಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಪಾರಂಕಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ರತ್ನಾಕರ ಶೆಟ್ಟಿ ಮೂಡಯೂರು, ಬಾಳ್ತಿಲ ಗ್ರಾ ಪಂ ಅಧ್ಯಕ್ಷ ಚಂದ್ರಶೇಖರ ಪೂಜಾರಿ, ಹಿರಿಯ ವಕೀಲರಾದ ಜಗದೀಶ ಶೇಣವ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು.


ಪ್ರತಿಭಾ ಶ್ರೀಧರ ಶೆಟ್ಟಿ ಹಾಗೂ ಮನೆಯವರ, ಕಲಾಭಿಮಾನಿಗಳ ಗೌರವ ಉಪಸ್ಥಿತಿಯಲ್ಲಿ ಕಲಾವಿದರನ್ನು ಶಾಲು ಫಲಪುಷ್ಪ ಸ್ಮರಣಿಕೆ ಗೌರವನಿಧಿಯೊಂದಿಗೆ ಸನ್ಮಾನಿಸಲಾಯಿತು. ಯಕ್ಷಗಾನ ಸಂಘಟಕ ಬಿ. ಜನಾರ್ದನ ಅಮುಂಜೆ ಕಾರ್ಯಕ್ರಮ ನಿರೂಪಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top