ಬಸ್ ಬೈಕ್ ಡಿಕ್ಕಿ: ಅಪ್ಪ ಮಗ ಅಪಘಾತಕ್ಕೆ ಬಲಿ

Chandrashekhara Kulamarva
0


ಬಂಟ್ವಾಳ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಬಕ ಸಮೀಪದ ಕುವೆತ್ತಿಲ ಎಂಬಲ್ಲಿ  ರಸ್ತೆತಿರುವಿನಲ್ಲಿ ಕೆಎಸ್ ಆರ್ ಟಿ ಸಿ ಬಸ್ ಮತ್ತು ಬೈಕ್ ನಡುವೆ ಭಾನುವಾರ  ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಬಂಟ್ವಾಳ ತಾಲೂಕಿನ ನರಿಕೊಂಬು ಬಳಿಯ ಬೋರುಗುಡ್ಡೆ ನಿವಾಸಿ ನರಿಕೊಂಬು ಗ್ರಾಮ ಪಂಚಾಯತ್ ಸದಸ್ಯ ಹಾಗೂ ಸಮಾಜ ಸೇವಾ ಬ್ಯಾಂಕ್ ನಿರ್ದೇಶಕರಾದ ಅರುಣ ಕುಲಾಲ್‌ (45) ಹಾಗೂ ಅವರ ಪುತ್ರ ಧ್ಯಾನ್ (15)ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.


ಅವರು ಸುಳ್ಯದಲ್ಲಿ ನಡೆಯಲಿದ್ದ ಮದುವೆಗಾಗಿ ಹೊರಟಿದ್ದರು. ತಾಯಿ ಬಸ್ಸಿನಲ್ಲಿ ಪ್ರಯಾಣಿಸಿದ್ದರು. ತಂದೆ ಮಗ ಬೈಕ್ ನಲ್ಲಿ ಹೋಗುತ್ತಿದ್ದರು. ಬಸ್ ಚಾಲಕನ ಅಜಾಗರೂಕತೆಯಿಂದ ಇಬ್ಬರು ಜೀವಕಳೆದುಕೊಳ್ಳುವಂತಾಯಿತು. ಚಾಲಕನ ವಿರುದ್ದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top