ನಿಯಂತ್ರಣ ತಪ್ಪಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ; ಚಾಲಕ ವಿಧಿವಶ

Upayuktha
0


ಬಂಟ್ವಾಳ: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ದಾರುಣ ಘಟನೆ ಬಿ.ಸಿ. ರೋಡಿನಲ್ಲಿ ಮುಂಜಾನೆ ವೇಳೆ ನಡೆದಿದೆ.


ಮಂಚಿ  ಕೊಳ್ನಾಡು ನೂಜಿ ನಿವಾಸಿ ಜಯರಾಮ (57) ಎಂಬವರು ಮೃತರಾಗಿದ್ದು‌ ಅವರು ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಕ್ಯಾಂಟೀನ್ ನಡೆಸುತ್ತಿದ್ದರು. ಅವರು ಬೆಳಿಗ್ಗೆ ಸುಮಾರು‌ 4.30ರ ಹೊತ್ತಿಗೆ ಮನೆಯಿಂದ ಮಂಗಳೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಜೋರಾಗಿ ಮಳೆಸುರಿದು ಕಾರು ನಿಯಂತ್ರಣ ಕಳೆದುಕೊಂಡು ಬಿ.ಸಿ. ರೋಡು ಪೇಟೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ ಎನ್ನಲಾಗಿದೆ. ಕಾರು ಸಂಪೂರ್ಣ ಜಖಂಗೊಂಡಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ‌ಎಸ್.ಐ ಭೇಟಿ ನೀಡಿ ಪರಿಶೀಲನೆ ನಡೆಸಿ ಘಟನೆ ದಾಖಲಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top