ನಂದಳಿಕೆ ಬಾಲಚಂದ್ರ ರಾವ್ ನಿಧನಕ್ಕೆ ದ.ಕ ಜಿಲ್ಲಾ ಕಸಾಪ ಸಂತಾಪ

Upayuktha
0


ಮಂಗಳೂರು: ಹಿರಿಯ ಸಂಘಟಕ ನಂದಳಿಕೆ ಬಾಲಚಂದ್ರ ರಾವ್ ಅವರ ನಿಧನಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತು ಸಂತಾಪ ವ್ಯಕ್ತಪಡಿಸಿದೆ.


ಕರ್ಣಾಟಕ ಬ್ಯಾಂಕಿನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದ ನಂದಳಿಕೆ ಬಾಲಚಂದ್ರ ರಾವ್ ಕవి ಮುದ್ದಣನ ಹುಟ್ಟೂರಾದ ನಂದಳಿಕೆಯಲ್ಲಿ ಮುದ್ದಣ ಸ್ಮಾರಕ ಮಿತ್ರ ಮಂಡಳಿ ಸ್ಥಾಪಿಸಿ, ಕವಿಯನ್ನು ನೆನಪಿಸುವ ನೂರಾರು ಸಾಹಿತ್ಯಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದಾರೆ. ಜೊತೆಗೆ ಮಂಗಳೂರು ವಿ.ವಿಯಲ್ಲಿ ಕವಿಯ ನೆನಪಿನ ಅಧ್ಯಯನ ಪೀಠಕ್ಕಾಗಿ ಶ್ರಮಿಸಿದ್ದರು. ಇವರ ಸಾಹಿತ್ಯ ಸೇವೆಗಾಗಿ ಮುದ್ದಣ ಪುರಸ್ಕಾರ, ಜಿಲ್ಲಾ ರಾಜ್ಯೋತ್ಸವ ಹಾಗೂ ಹಲವಾರು ಪುರಸ್ಕಾರಕ್ಕೆ ಪಾತ್ರರಾಗಿದ್ದರು.


ಇವರ ನಿಧನ ಅತೀವ ದುಃಖ ತಂದಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಮತ್ತು ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಎಂ.ಪಿ. ಶ್ರೀನಾಥ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top