ಆಪರೇಷನ್ ಸಿಂದೂರದ ಮೂಲಕ ಉಗ್ರರಿಗೆ ಮರಣ ದಂಡನೆ: ಡಾ.ಭರತ್ ಶೆಟ್ಟಿ ವೈ

Chandrashekhara Kulamarva
0


ಮಂಗಳೂರು: ಕಾಶ್ಮೀರದ ಪೆಹಲ್ಗಾಂನಲ್ಲಿ ನರಮೇಧ ನಡೆಸಿ ಹಲವಾರು ಹೆಣ್ಣು ಮಕ್ಕಳ ಸಿಂದೂರ ಕಸಿದುಕೊಂಡ ಉಗ್ರರಿಗೆ ತಕ್ಕ ಪಾಠ ಕಲಿಸಲು   ಪ್ರತಿಯಾಗಿ ಭಾರತ ಸರ್ಕಾರ ಪಾಕಿಸ್ತಾನದ ಉಗ್ರಗಾಮಿಗಳ ನೆಲೆಗಳ ಮೇಲೆ ಆಪರೇಷನ್ ಸಿಂದೂರ ಮೂಲಕ ಯಶಸ್ವಿಯಾಗಿ ದಾಳಿ ನಡೆಸಿ, ಉಗ್ರರ ಮೃತ ದೇಹವೂ ಗುರುತಿಸಲಾಗದಷ್ಟು ಭೀಕರ ಮರಣದಂಡನೆ ನೀಡಿದೆ. ಇದು ಉಗ್ರಗಾಮಿಗಳನ್ನು ಪೋಷಿಸುವ ರಾಷ್ಟ್ರಗಳಿಗೆ, ಭಾರತದ ಒಳಗಡೆಯೂ  ಉಗ್ರಗಾಮಿಗಳಿಗೆ ಕುಮ್ಮಕ್ಕು, ಹಣ ಸಹಾಯ ನೀಡುವ ದೇಶದ್ರೋಹಿಗಳಿಗೆ ಎಚ್ಚರಿಕೆಯ ಸಂದೇಶವಾಗಿದೆ ಎಂದು ಶಾಸಕ ಡಾ. ಭರತ್ ಶೆಟ್ಟಿ ಹೇಳಿದ್ದಾರೆ.


ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರಕಾರ ಉಗ್ರಗಾಮಿಗಳನ್ನು ನಿರ್ಮೂಲನೆ ಮಾಡಲು ತಿಳಿದಿದೆ, ಜಾಗತಿಕವಾಗಿ ಶಾಂತಿಯನ್ನು ಸ್ಥಿರತೆಯನ್ನು ಕಾಪಾಡಿಕೊಳ್ಳಲು ಕೂಡ ಬದ್ಧವಾಗಿದೆ ಎಂದು ತೋರಿಸಿಕೊಟ್ಟಿದೆ. ಭಾರತ ಇದೀಗ ಪಾಕಿಸ್ತಾನದ ಮೇಲೆ ನಡೆಸಿರುವ ದಾಳಿ ಸೀಮಿತವಾಗಿರು ವುದಾದರೂ ಪಾಕಿಸ್ತಾನ ತನ್ನ ನರಿ ಬುದ್ಧಿಯನ್ನು ಮತ್ತೆ ಮತ್ತೆ ತೋರಿಸಿದಲ್ಲಿ ಮುಂದಿನ ಬಾರಿಯ ಆಕ್ರಮಣ ಪಾಕ್ ಆಕ್ರಮಿತ ಕಾಶ್ಮೀರವನ್ನು ವಶಕ್ಕೆ ಪಡೆಯುವುದರೊಂದಿಗೆ ಪೂರ್ಣಗೊಳಿಸಬೇಕು ಎಂದು ಅವರು ನುಡಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top