ಮೇ 20: ಧರ್ಮಸ್ಥಳದಲ್ಲಿ ವ್ಯಸನಮುಕ್ತರ ಸಮ್ಮಿಲನ

Upayuktha
0


ಉಜಿರೆ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಆಶ್ರಯದಲ್ಲಿ ರಾಜ್ಯದೆಲ್ಲೆಡೆ ನಡೆಸಲಾದ ಮದ್ಯವರ್ಜನ ಶಿಬಿರದಲ್ಲಿ ಭಾಗವಹಿಸಿ ಸಂತೃಪ್ತ ಜೀವನ ನಡೆಸುತ್ತಿರುವ ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮವನ್ನು ಮೇ 20 ರಂದು ಮಂಗಳವಾರ ಬೆಳಿಗ್ಗೆ ಹತ್ತು ಗಂಟೆಗೆ ಧರ್ಮಸ್ಥಳದಲ್ಲಿ ಅಮೃತವರ್ಷಿಣಿ ಸಭಾಭವನದಲ್ಲಿ ಆಯೋಜಿಸಲಾಗಿದೆ.


ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಶಿರಹಟ್ಟಿ ಮಠದ ನಿರಂಜನ ಸ್ವಾಮೀಜಿ ಆಶೀರ್ವಚನ ನೀಡುವರು.


ಬೆಂಗಳೂರಿನ ಕ್ಷೇಮವನದ ಸಿ.ಇ.ಒ. ಶ್ರದ್ಧಾ ಅಮಿತ್ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮಗಳಿಗೆ ಚಾಲನೆ ನೀಡುವರು.


ಹೇಮಾವತಿ ವೀ. ಹೆಗಡೆ ಶುಭಾಶಂಸನೆ ಮಾಡುವರು.  2900 ಮಂದಿ ವ್ಯಸನ ಮುಕ್ತರು ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top