ಧರ್ಮಸ್ಥಳದಲ್ಲಿ ಹತ್ತನಾವಧಿ ಉತ್ಸವ

Upayuktha
0


ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಶ್ರೀ ಮಹಾಗಣಪತಿ ದೇವರ ಮೂರ್ತಿಯನ್ನು ವೈಭವದ ಮೆರವಣಿಗೆಯಲ್ಲಿ ಸ್ವಾಗತಿಸಲಾಯಿತು.


ಉಜಿರೆ: ಧರ್ಮಸ್ಥಳದಲ್ಲಿ ಹತ್ತನಾವಧಿ (ತುಳು: ಪತ್ತನಾಜೆ) ನಿಮಿತ್ತ ಶನಿವಾರ ದೇವಸ್ಥಾನದಲ್ಲಿ ರಂಗಪೂಜೆ, ಬಲಿ ಉತ್ಸವ, ವಸಂತ ಪೂಜೆ, ಅಷ್ಟಾವಧಾನ ಸೇವೆಗಳು ನಡೆದವು. ಬಳಿಕ ಧ್ವಜಮರ ಅವರೋಹಣ ನಡೆಯಿತು. ಇನ್ನು ದೀಪಾವಳಿ ವರೆಗೆ ದೇವಸ್ಥಾನದಲ್ಲಿ ರಂಗಪೂಜೆ, ಉತ್ಸವ ಮೊದಲಾದ ವಿಶೇಷ ಸೇವೆಗಳು ನಡೆಯುವುದಿಲ್ಲ.


ಧರ್ಮಸ್ಥಳ ಯಕ್ಷಗಾನ ಮೇಳದ ಶ್ರೀ ಮಹಾಗಣಪತಿ ದೇವರ ಮೂರ್ತಿಯನ್ನು ಶನಿವಾರ ಸಂಜೆ ಬಿಡಾರದ ಮಣೆಗಾರರ ಮನೆಯಿಂದ ಭವ್ಯ ಮೆರವಣಿಗೆಯಲ್ಲಿ ಬರಮಾಡಿಕೊಳ್ಳಲಾಯಿತು.


ಕ್ಷೇತ್ರದ ಆನೆಗಳು, ಬಸವ, ಹೂವಿನ ಕೋಲು, ವಾದ್ಯ ಮೇಳ, ಚೆಂಡೆ ಮೇಳ, ಶಂಖ-ಜಾಗಟೆ ವಾದನ ಮೆರವಣಿಗೆಗೆ ವಿಶೇಷ ಮೆರುಗನ್ನು ನೀಡಿತು. ದೇವಸ್ಥಾನದ ಎದುರು ದರ್ಶನ ಸೇವೆ ನಡೆಸಿದ ಬಳಿಕ ಛತ್ರದ ಶ್ರೀ ಮಹಾಗಣಪತಿ ಗುಡಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು.


ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು, ಡಿ. ಹರ್ಷೇಂದ್ರ ಕುಮಾರ್ ಮತ್ತು ಕುಟುಂಬಸ್ಥರು, ನೌಕರರು ಹಾಗೂ ಭಕ್ತರು ಉಪಸ್ಥಿತರಿದ್ದರು.


  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top