ವೈದ್ಯರಿಗೆ ಸಾಮಾಜಿಕ ಕಳಕಳಿ ಅಗತ್ಯ: ಡಾ. ಚೂಂತಾರು

Upayuktha
0


ಮಂಗಳೂರು: ವೈದ್ಯಕೀಯ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಪ್ರತಿಯೊಬ್ಬ ವೈದ್ಯರಿಗೂ ಸಾಮಾಜಿಕ ಹೊಣೆಗಾರಿಕೆ ಇದೆ. ಎಲ್ಲ ವೈದ್ಯರು ತಮ್ಮ ಹೊಣೆಗಾರಿಕೆ ಅರಿತು ನಿಭಾಯಿಸಿದ್ದಲ್ಲಿ ಸುಂದರ ಸಮಾಜದ ನಿರ್ಮಾಣ ಸಾಧ್ಯವಿದೆ. ಕಳೆದ 28 ವರ್ಷಗಳಿಂದ ಹೊಸಂಗಡಿಯಲ್ಲಿ ಸೇವೆ ನೀಡುತ್ತಿರುವ ಸುರಕ್ಷಾ ದಂತ ಚಿಕಿತ್ಸಾಲಯ ತಮ್ಮ ದಂತ ವೈದ್ಯಕೀಯ ಸೇವೆ ಜೊತೆಗೆ ಹಲವಾರು ಸಾಮಾಜಿಕ ಬದ್ಧತೆಯ ರಕ್ತದಾನ ಶಿಬಿರ, ಉಚಿತ ರಕ್ತದೊತ್ತಡ ಶಿಬಿರ, ಮಧುಮೇಹ ತಪಾಸಣಾ ಶಿಬಿರ, ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರ ನಡೆಸುತ್ತಾ ತನ್ನ ಸಾಮಾಜಿಕ ಕಾಳಜಿಯನ್ನು ಮೆರೆದಿದೆ. ರೋಗ ಚಿಕಿತ್ಸೆಗಿಂತ ರೋಗ ತಡೆಗಟ್ಟಲು ಹೆಚ್ಚು ಆದ್ಯತೆ ನೀಡಬೇಕು ಎಂದು ಸುರಕ್ಷಾ ದಂತ ಚಿಕಿತ್ಸಾಲಯದ ದಂತ ವೈದ್ಯ ಡಾ ಮುರಲೀ ಮೋಹನ್ ಚೂಂತಾರು ನುಡಿದರು.


ಶನಿವಾರ (ಮೇ 31) ವಿಶ್ವ ತಂಬಾಕು ರಹಿತ ದಿನದ ಅಂಗವಾಗಿ ಹೊಸಂಗಡಿಯ ಸುರಕ್ಷಾ ದಂತ ಚಿಕಿತ್ಸಾಲಯದಲ್ಲಿ ಬೆಳಿಗ್ಗೆ 9 ರಿಂದ ಸಂಜೆ 6ರರವರೆಗೆ ನಡೆದ ಉಚಿತ ಬಾಯಿ ಕ್ಯಾನ್ಸರ್ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ಇದೇ ಸಂದರ್ಭದಲ್ಲಿ ಎಲ್ಲಾ ರೋಗಿಗಳಿಗೆ ಡಾ|| ಚೂಂತಾರು ಅವರು ಬರೆದ ‘ಅರಿವು’ ಬಾಯಿ ಕ್ಯಾನ್ಸರ್ ಮಾರ್ಗದರ್ಶಿ ಪುಸ್ತಕವನ್ನು ಉಚಿತವಾಗಿ ಹಂಚಲಾಯಿತು. ಈ ಸಂದರ್ಭದಲ್ಲಿ ದಂತ ವೈದ್ಯರಾದ ಡಾ|| ಮುರಲೀ ಮೋಹನ್ ಚೂಂತಾರು ಮತ್ತು ಡಾ|| ರಾಜಶ್ರೀ ಮೋಹನ್, ದಂತ ಪರಿಚಾರಿಕೆಯರಾದ ರಮ್ಯ, ಚೈತ್ರ, ಸುಶ್ಮಿತಾ, ಜಯಶ್ರೀ ಮುಂತಾದವರು ಉಪಸ್ಥಿತರಿದ್ದರು.ಸುಮಾರು ೨೫ ಮಂದಿ ರೋಗಿಗಳು ಈ ಶಿಬಿರದ ಪ್ರಯೋಜನ ಪಡೆದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top