ನಿಯಮ ಉಲ್ಲಂಘಿಸುತ್ತಿದೆ ED: ಸುಪ್ರೀಂಕೋರ್ಟ್‌ ತರಾಟೆ

Upayuktha
1 minute read
0



ನವದೆಹಲಿ: ದೇಶದ ಒಕ್ಕೂಟ ವ್ಯವಸ್ಥೆಯ ನಿಯಮಗಳನ್ನು ಉಲ್ಲಂಘಿಸುವ ಮೂಲಕ ಮಿತಿ ಮೀರಿದ್ದೀರಿ ಎಂದು ಜಾರಿ ನಿರ್ದೇಶನಾಲಯ (ಇಡಿ)ವನ್ನು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.


ತಮಿಳುನಾಡಿನಲ್ಲಿ ಸರ್ಕಾರಿ ಒಡೆತನದ ಮದ್ಯ ಮಾರಾಟ ಮಳಿಗೆಗಳ ಮೇಲೆ ಇಡಿ ದಾಳಿ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಇಡಿಗೆ ಚಾಟಿ ಬೀಸಿದ ಸುಪ್ರೀಂ ಕೋರ್ಟ್‌, ಮದ್ಯ ಮಾರಾಟ ಮಳಿಗೆಗಳ ಲೈಸೆನ್ಸ್ ನೀಡಿಕೆಯಲ್ಲಿ ಅಕ್ರಮ ಎಸಗಲಾಗಿದೆ ಎಂದು ಆರೋಪಿಸಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. 


ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ನೇತೃತ್ವದ ಪೀಠವು ಗುರುವಾರ ಜಾರಿ ನಿರ್ದೇಶನಾಲಯದ ತನಿಖೆಗೆ ಮುಂದಿನ ಆದೇಶದವರೆಗೂ ತಡೆಯಾಜ್ಞೆ ನೀಡಿದೆ. ನೀವು ಸಂಸ್ಥೆಗಳ ಮೇಲೆ ದೂರು ದಾಖಲಿಸಿಕೊಳ್ಳುವ ಬದಲು ವ್ಯಕ್ತಿಗಳ ಮೇಲೆ ಪ್ರಕರಣ ದಾಖಲಿಸಿ ನೋಟಿಸ್ ಕೊಡುತ್ತಿದ್ದೀರಿ. ಇದು ನಿಮ್ಮ ಮಿತಿಗಳನ್ನು ಮೀರುತ್ತಿರುವುದನ್ನು ತೋರಿಸುತ್ತದೆ ಎಂದು ಪೀಠ ಕಿಡಿ ಕಾರಿದೆ. ಸುಪ್ರೀಂಕೋರ್ಟ್ ಆದೇಶಕ್ಕೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಸಂತಸ ವ್ಯಕ್ತಪಡಿಸಿದ್ದಾರೆ.


ಮದ್ಯ ಮಾರಾಟ ಸರಕು ಮಾರಾಟಗಾರರು ಮತ್ತು ಚಿಲ್ಲರೆ ಮಾರಾಟಗಾರರ ಪ್ರಾಬಲ್ಯ ತೊಡೆದುಹಾಕಲು ತಮಿಳುನಾಡು ಸರ್ಕಾರ ಅಲ್ಲಿ ಮದ್ಯ ಮಾರಾಟ ಕಾರ್ಪರೇಷನ್ ಆರಂಭಿಸಿದ್ದು, ಈ ಮೂಲಕ ಮದ್ಯ ಮಾರಾಟಗಾರರಿಗೆ ಲೈಸೆನ್ಸ್ ನೀಡುವ ಮೂಲಕ ಶಿಸ್ತುಬದ್ಧ ಮಾರಾಟಕ್ಕೆ ಚಾಲನೆ ನೀಡಿತ್ತು.


ಲೈಸೆನ್ಸ್ ನೀಡಿಕೆಯಲ್ಲಿ ಅಕ್ರಮ ಆಗಿದೆ ಎಂದು ಆರೋಪಿಸಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 16 ರಂದು, ಇಡಿ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ಟೆಂಡರ್ ಪ್ರಕ್ರಿಯೆಗಳಲ್ಲಿ ದಾರಿ ತಪ್ಪಿಸಲಾಗಿದೆ ಮತ್ತು ಡಿಸ್ಟಿಲರಿ ಕಂಪನಿಗಳ ಮೂಲಕ 1,000 ಕೋಟಿ ರೂ. ಲೆಕ್ಕಕ್ಕೆ ಸಿಗದ’ ನಗದು ವಹಿವಾಟು ನಡೆದಿದೆ,  ಅಕ್ರಮಗಳು ಕಂಡುಬಂದಿವೆ ಎಂದು ಇಡಿ ಆರೋಪಿಸಿತ್ತು. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter.

إرسال تعليق

0 تعليقات
إرسال تعليق (0)
To Top