ವಿಸ್ಡಮ್ ಲ್ಯಾಂಡ್ ಶಾಲೆಯ ಎಸ್ ಎಸ್.ಎಲ್.ಸಿ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ

Upayuktha
0


ಬಳ್ಳಾರಿ: ಸಂಗನಕಲ್ಲು ಗ್ರಾಮದಲ್ಲಿರುವ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ವಿಸ್ಡಮ್ ಲ್ಯಾಂಡ್ ಶಾಲೆ ಪ್ರಸ್ತುತ ಎಸ್ ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. 

ಹರ್ಷ ಡಿ.ಆರ್ ಎನ್ನುವ ವಿದ್ಯಾರ್ಥಿ 625 ಅಂಕಗಳಿಗೆ 620 ಅಂಕಗಳನ್ನು ಪಡೆಯುವ ಮೂಲಕ ಬಳ್ಳಾರಿ ಜಿಲ್ಲೆಯಲ್ಲಿ ಮೂರನೇ ಸ್ಥಾನವನ್ನು ಪಡೆದಿದ್ದಾನೆ. ತಾಲೂಕು ಮಟ್ಟದಲ್ಲಿ ಇಬ್ಬರು ವಿದ್ಯಾರ್ಥಿಗಳಾದ ಹರ್ಷ ಡಿ. ಆರ್.ಎನ್ನುವ ವಿದ್ಯಾರ್ಥಿ 625 ಕ್ಕೆ 620 ಅಂಕಗಳನ್ನು ಮತ್ತು ಸಂತೋಷ್ ಕುಮಾರ್ ಕೆ.ಎಂ ಎನ್ನುವ ವಿದ್ಯಾರ್ಥಿಯು 625 ಕ್ಕೆ 619 ಅಂಕಗಳನ್ನು ಪಡೆಯುವ ಮೂಲಕ ತಾಲೂಕು ಮಟ್ಟದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.. ಪರೀಕ್ಷೆ ಬರೆದ 91 ವಿದ್ಯಾರ್ಥಿಗಳಲ್ಲಿ 91 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇಕಡ 100 ರಷ್ಟು ಫಲಿತಾಂಶವನ್ನು ಪಡೆದುಕೊಂಡಿದೆ ಎಂದು ಶಾಲೆಯ ಪ್ರಾಂಶುಪಾಲರಾದ ಕಟ್ಟೆಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 91 ವಿದ್ಯಾರ್ಥಿಗಳಲ್ಲಿ ಶೇಕಡ 90ಕ್ಕಿಂತ ಹೆಚ್ಚು ಅಂಕಗಳನ್ನು 23 ಮಕ್ಕಳು ಹಾಗೂ ಶೇಕಡ 85ಕ್ಕಿಂತ ಹೆಚ್ಚು ಅಂಕಗಳನ್ನು 29 ವಿದ್ಯಾರ್ಥಿಗಳು ಪಡೆದಿದ್ದಾರೆ. ಉಳಿದ ವಿದ್ಯಾರ್ಥಿಗಳು ಪ್ರಥಮ ಸ್ಥಾನದಲ್ಲಿ ಉತ್ತೀರ್ಣರಾಗಿದ್ದು ಶಾಲೆಯ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ. ಉತ್ತೀರ್ಣರಾದ ಎಲ್ಲಾ ಮಕ್ಕಳಿಗೆ ಆಡಳಿತ ಮಂಡಳಿಯವರು, ಮುಖ್ಯ ಗುರುಗಳು ಮತ್ತು ಶಿಕ್ಷಕರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top