ಜಯಂಟ್ಸ್ ಗ್ರೂಪ್ ಬ್ರಹ್ಮಾವರ: ವಿಶ್ವ ದಾದಿಯರ ದಿನಾಚರಣೆ

Upayuktha
0


ಉಡುಪಿ: ಲೋoಬಾಡ್೯ ಮೆಮೋರಿಯಲ್ ಆಸ್ಪತ್ರೆ (ಮಿಷನ್) ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಮತ್ತು ವೈದ್ಯಕೀಯ ಪ್ರತಿನಿಧಿಗಳ ಸಂಘ ಇದರ ವತಿಯಿಂದ ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆ ಕಾರ್ಯಕ್ರಮ ಮೇ 12ರಂದು ಆಸ್ಪತ್ರೆಯ ಸಭಾಂಗಣದಲ್ಲಿ ನಡೆಯಿತು.


ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ, ಆಸ್ಪತ್ರೆಯ ನಿರ್ದೇಶಕ ಡಾ. ಸುಶೀಲ್ ಜತ್ತನ್ನ, ಶತಮಾನ ಕಂಡ ಈ ಆಸ್ಪತ್ರೆಯಲ್ಲಿ ಅನೇಕ ರೋಗಿಗಳು ಉತ್ತಮ ಚಿಕಿತ್ಸೆ ಪಡೆದಿದ್ದಾರೆ. ಈ ನಿಟ್ಟಿನಲ್ಲಿ ದಾದಿಯರ ಸೇವೆ ಅತ್ಯಂತ ಮಹತ್ವದ್ದು ದಾದಿಯರು ಹಗಲು ರಾತ್ರಿ ಎನ್ನದೆ ರೋಗಿಗಳ ಸೇವೆಯನ್ನು ಉತ್ತಮವಾಗಿ ಮಾಡುತ್ತಿದ್ದಾರೆ. ದಾದಿಯರು ರೋಗಿಗಳಿಗೆ ದೇವರಾಗಿ ಕಾಣುತ್ತಾರೆ ಎಂದರು.


ಜಿಲ್ಲಾ ಸರ್ಜನ್ ಡಾ. ಅಶೋಕ್ ಮಾತನಾಡಿ, ದಾದಿಯರು ರೋಗಿಗಳ ನಿಜವಾದ ಆಪದ್ಬಾಂಧವರು. ತಮ್ಮ ಸೇವೆಯಲ್ಲಿ ಸಂತೋಷವನ್ನು ಕಾಣುವ ಇವರನ್ನು ನೆನಪು ಮಾಡಿಕೊಳ್ಳುವುದು ನಮ್ಮ ಆದ್ಯ ಕರ್ತವ್ಯ ಎಂದರು.


ಜಯಂಟ್ಸ್ ಸೆಂಟ್ರಲ್ ಕಮಿಟಿ ಸದಸ್ಯ ದಿನಕರ ಅಮೀನ್ ವಿಶ್ವ ದಾದಿಯರ ದಿನಾಚರಣೆ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ನಡೆಸಿದ ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಕಾರ್ಯ ಶ್ಲಾಘನೀಯ ಎಂದರು.


ವೇದಿಕೆಯಲ್ಲಿ ಜಯಂಟ್ಸ್ ಫೆಡರೇಶನ್ ಅಧ್ಯಕ್ಷ ತೇಜಶ್ವರ್ ರಾವ್, ಫೆಡರೇಶನ್ ಮಾಜಿ ಅಧ್ಯಕ್ಷ ಮಧುಸೂದನ್ ಹೇರೂರು, ವಿವೇಕಾನಂದ ಕಾಮತ್, ವೈದ್ಯಕೀಯ ಪ್ರತಿನಿಧಿ ಸಂಘದ ಕಾರ್ಯದರ್ಶಿ ಪ್ರಸನ್ನ ಕಾರಂತ್, ಉಪಸ್ಥಿತರಿದ್ದರು .ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ ಅಧ್ಯಕ್ಷ ಅಣ್ಣಯ್ಯ ದಾಸ್ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ, ಮಿಲ್ಟನ್ ಒಲಿವೇರಾ, ಶ್ರೀನಾಥ್, ಡೊರಿಸ್ ಡಿಸೋಜ, ರೋಹಿ ರತ್ನಾಕರ್ ಮುಂತಾದವರು ಉಪಸ್ಥಿತರಿದ್ದರು.


ಈ ಸಂದರ್ಭದಲ್ಲಿ ಹಿರಿಯ ದಾರಿಯರಾದ ಶಿಲ್ಪ ಎಸ್, ದೀನಾ ಪ್ರಭಾವತಿ ಅಲ್ಮೆಡ, ಲೀಲಾವತಿ, ರಿನಾ ವೆಲೆನ್ಸಿಯಾ ಡಿಸೋಜ ಮುಂತಾದವರನ್ನು ಸನ್ಮಾನಿಸಲಾಯಿತು. ಮಧುಸೂದನ್ ಹೇರೂರು ಪ್ರಸ್ತಾಪಿಸಿದರು ರಾಘವೇಂದ್ರ ಕವಾ೯ಲು ನಿರೂಪಿಸಿದರು. ಈ ಸಂದರ್ಭದಲ್ಲಿ ದಾದಿಯರಿಗೆ ರಸಪ್ರಶ್ನೆ ಕಾರ್ಯಕ್ರಮ ನಡೆಸಲಾಯಿತು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top