ಪಿ.ಯು.ಸಿ ಸೈನ್ಸ್ ಹಾಗೂ ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ನೇರವಾಗಿ ದ್ವಿತೀಯ ವರ್ಷದ ಡಿಪ್ಲೊಮಾ ಕೋರ್ಸ್‍ಗಳ ಪ್ರವೇಶಾತಿಗೆ ಅರ್ಹರಾಗಿರುತ್ತಾರೆ. ಈ ಎಲ್ಲಾ ಕೋರ್ಸ್‍ಗಳನ್ನು ಅಧ್ಯಯನ ಮಾಡುವಾಗ 3 ವರ್ಷದ ಡಿಪ್ಲೊಮಾ ತರಬೇತಿ ನಂತರ ಕಡ್ಡಾಯ ಒಂದು ವರ್ಷದ ಇಂಟರ್ನ್‍ಶಿಪ್ ತರಬೇತಿ ನೀಡಲಾಗುತ್ತದೆ. ಇದು ವಿದ್ಯಾರ್ಥಿಗಳು ಕೈಗಾರಿಕಾ ವಾತಾವರಣಕ್ಕೆ ಹೊಂದಿಕೊಳ್ಳಲು ಸುಲಭವಾಗುತ್ತದೆ. ಈ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮಾಸಿಕ 15,000 ರಿಂದ 20,000 ರೂಪಾಯಿವರೆಗೆ ಶಿಷ್ಯವೇತನ ನೀಡಲಾಗುತ್ತದೆ.
ಮಾಹಿತಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಪ್ಲಾಟ್ ನಂ. 7ಇ ಬೈಕಂಪಾಡಿ ಕೈಗಾರಿಕಾ ವಲಯ ಮೊಬೈಲ್ ನಂ : 8073208137, 7899070548, 0824-2408003) ಸಂಪರ್ಕಿಸಬಹುದು ಎಂದು ಜಿ.ಟಿ.ಟಿ.ಸಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ

