ಆಚಾರ-ವಿಚಾರ ಮತ್ತು ಆಹಾರ-ವಿಹಾರ ಪರಿಶುದ್ಧವಾಗಿದ್ದಲ್ಲಿ ಸುಖ-ಶಾಂತಿ, ನೆಮ್ಮದಿ ಸಿಗುತ್ತದೆ

Chandrashekhara Kulamarva
0

  • ನಿವೃತ್ತ ಪ್ರಾಂಶುಪಾಲ ಪ್ರೊ. ಬಿ.ಎ. ಕುಮಾರ ಹೆಗ್ಡೆ ಅಭಿನಂದನಾ ಭಾಷಣ ಮಾಡಿದರು 
  • ಹಿರಿಯ ನಾಗರಿಕರಿಗೆ ಸನ್ಮಾನ


ಉಜಿರೆ: ಯಾವಾಗಲೂ ಪ್ರಬಲ ಇಚ್ಛಾಶಕ್ತಿಯೊಂದಿಗೆ ಧನಾತ್ಮಕ ಚಿಂತನೆಯೊಂದಿಗೆ ಎಲ್ಲರೊಂದಿಗೆ ಮುಕ್ತವಾಗಿ ಪ್ರೀತಿ-ವಿಶ್ವಾಸದಿಂದ ಬೆರೆಯಬೇಕು. ನಮ್ಮ ಆಚಾರ-ವಿಚಾರ, ಮತ್ತು ಆಹಾರ-ವಿಹಾರ ಪರಿಶುದ್ಧವಾಗಿದ್ದಲ್ಲಿ ಸುಖ-ಶಾಂತಿ, ನೆಮ್ಮದಿಯ ಜೀವನ ಸಾಧ್ಯವಾಗುತ್ತದೆ ಎಂದು ಉಜಿರೆಯ ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ.ಎ. ಕುಮಾರ ಹೆಗ್ಡೆೆ ಹೇಳಿದರು.


ಅವರು ಶನಿವಾರ ಬೆಳ್ತಂಗಡಿಯಲ್ಲಿ ಅಂಬೇಡ್ಕರ್‌ ಭವನದಲ್ಲಿ  ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ 75 ವರ್ಷ ದಾಟಿದ ಹಿರಿಯ ನಾಗರಿಕರನ್ನು ಗೌರವಿಸಿ ಮಾತನಾಡಿದರು.


ಯಾರೂ ಸಾವಿಗೆ ಹೆದರಬೇಕಾಗಿಲ್ಲ. ಏಕೆಂದರೆ ಸಾವು ಬರುವಾಗ ನಾವು ಇರುವುದಿಲ್ಲ. ನಾವು ಇರುವಷ್ಟು ದಿನ ಸಾವು ಬರುವುದಿಲ್ಲ. ಯಾವಾಗಲೂ ಪರಿಶುದ್ಧ ಮನದಿಂದ  ಉತ್ತಮ ಸೇವಾ ಕಾರ್ಯಗಳನ್ನು ಮಾಡಬೇಕು. ಇದರಿಂದ ಅಪರಿಮಿತ ಸಂತೋಷ ಮತ್ತು ತೃಪ್ತಿ ಸಿಗುತ್ತದೆ ಎಂದು ಅವರು ಹೇಳಿದರು.


ಕೂಸಪ್ಪ ಗೌಡ, ದೇಜಪ್ಪ, ಚಾಕೊಚನ್, ಯಶೋದಾ, ಮಹಮ್ಮದ್, ಪುಷ್ಪಾ, ವೇಣೂರು, ನಮಿರಾಜ, ಆನಂದ ಶೆಟ್ಟಿ, ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆ ಮತ್ತು ಕುಂಞಪ್ಪ ಗೌಡ ಅವರನ್ನು ಗೌರವಿಸಲಾಯಿತು.


ಸನ್ಮಾನಿತರ ಪರವಾಗಿ ಪೀತಾಂಬರ ಹೇರಾಜೆ ಮತ್ತು ಕುಂಞಪ್ಪ ಗೌಡ ಕೃತಜ್ಞತೆ ವ್ಯಕ್ತಪಡಿಸಿದರು.  ನಿವೃತ್ತ ನೌಕರರ ಸಂಘದ ಅಧ್ಯಕ್ಷ ಬಿ. ವಿಠಲ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಕಾರ್ಯದರ್ಶಿ ವಿಶ್ವಾಸ ರಾವ್ ಧನ್ಯವಾದವಿತ್ತರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
To Top