ನವದೆಹಲಿ: ಭಾರತೀಯ ಸೇನೆಯು ಪಹಲ್ಗಾಮ್ ಉಗ್ರರ ದಾಳಿಗೆ ಪ್ರತಿಯಾಗಿ ಮಂಗಳವಾರ ತಡರಾತ್ರಿ ‘ಆಪರೇಷನ್ ಸಿಂಧೂರ್ʼ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿದ್ದು, ಪಾಕಿಸ್ತಾನದ 9 ಭಯೋತ್ಪಾದಕ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ. ಕಾರ್ಯಾಚರಣೆ ನಡೆಸಿದ ವೇಳೆ ಚೀನಾ ನಿರ್ಮಿತ ಪಾಕಿಸ್ತಾನದ JF-17 ಯುದ್ಧ ವಿಮಾನವನ್ನು ಭಾರತ ಹೊಡೆದು ಹಾಕಿದೆ ಎಂದು ಹೇಳಲಾಗಿದೆ.
ಪಾಕಿಸ್ತಾನ ಮತ್ತು ಪಿಒಕೆಯಲ್ಲಿ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಈ ದಾಳಿಯಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, 12 ಜನರು ಗಾಯಗೊಂಡಿದ್ದಾರೆ ಎಂದು ಪಾಕಿಸ್ತಾನ ತಿಳಿಸಿದೆ. ರಕ್ಷಣಾ ಸಚಿವಾಲಯ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲಿ ಆಪರೇಷನ್ ಸಿಂಧೂರ್ ನ ಗುರಿ ಭಯೋತ್ಪಾದಕ ಅಡಗುತಾಣಗಳನ್ನು ಗುರಿಯಾಗಿಸಿಕೊಳ್ಳುವುದು ಮಾತ್ರ ಎಂದು ಹೇಳಿದೆ. ಈ ದಾಳಿಯು ನೆರೆಯ ದೇಶದೊಂದಿಗೆ ಹೋರಾಡುವ ಗುರಿಯನ್ನು ಹೊಂದಿಲ್ಲ ಎಂದು ಸ್ಪಷ್ಟಪಡಿಸಿದೆ.
ಪಹಲ್ಗಾಂ ದಾಳಿಯ ಬಳಿಕ ಭಾರತ ಮತ್ತು ಪಾಕ್ ಸಂಬಂಧ ತೀವ್ರ ಹದಗೆಟ್ಟು, ಉದ್ವಿಗ್ನತೆಯು ಯುದ್ಧದ ಹಂತಕ್ಕೆ ಬಂದು ತಲುಪಿದೆ. ಉಭಯ ದೇಶಗಳ ಮಧ್ಯೆ ವ್ಯಾಪಾರ, ವಹಿವಾಟು, ಸಾರಿಗೆ ಸ್ಥಗಿತಗೊಂಡಿದೆ. ಪಾಕಿಸ್ತಾನದ ಉಗ್ರರು ಭಾರತದ ಹಿಂದೂ ಮಹಿಳೆಯ ಕುಂಕುಮ ಅಳಿಸಿ ಕಣ್ಣೀರಿಡುವಂತೆ ಮಾಡಿದ್ದರು ಅದಕ್ಕೆ ಪ್ರತಿಯಾಗಿ ಪಾಕಿಸ್ತಾನದ ಉಗ್ರ ನೆಲೆ ಮೇಲೆ ಭಾರತ ದಾಳಿ ನಡೆಸಿದೆ. ಅದಕ್ಕೆ ಆಪರೇಷನ್ ಸಿಂಧೂರ್ ಎಂದು ಹೆಸರಿಟ್ಟಿದೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ