ಮಂಗಳೂರು: ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ. ಜಿ.ವಿ. ಜೋಶಿ ಮತ್ತು ನವದೆಹಲಿಯ ಜೆ.ಎನ್.ಯು. ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ರಮೇಶ್ ಸಾಲಿಯಾನ್ ಅವರು ಬರೆದ ‘ಅರ್ಥಶಾಸ್ತ್ರದಲ್ಲಿ ಒಳಗೊಳ್ಳುವಿಕೆಯ ಅಭಿವೃದ್ಧಿಗಾಗಿ ಒಂದು ಶೋಧ' (A Search for Inclusive Growth in Arthashastra) ಪುಸ್ತಕದ ಬಿಡುಗಡೆಯು ಎಪ್ರಿಲ್ 26 ರಂದು ಪುಣೆಯಲ್ಲಿ ನಡೆಯಿತು.
ಐತಿಹಾಸಿಕ ಮಹತ್ವವುಳ್ಳ ಪುಣೆಯ ಡೆಕ್ಕನ್ ಕಾಲೇಜಿನಲ್ಲಿ ನಡೆದ ರಾಷ್ಟ್ರೀಯ ಸಮಾಜ ವಿಜ್ಞಾನ ಪರಿಷತ್ತು ಏರ್ಪಡಿಸಿದ್ದ ಏಳನೇ ವಾರ್ಷಿಕ ಸಮ್ಮೇಳನದಲ್ಲಿ ಮಹಾರಾಷ್ಟ್ರ ಸರ್ಕಾರದ ಉನ್ನತ ಮತ್ತು ತಾಂತ್ರಿಕ ಶಿಕ್ಷಣ ಸಚಿವರಾದ ಶ್ರೀ ಚಂದ್ರಕಾಂತ್ ಪಾಟೀಲ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿದರು.
ಡಾ. ಜಿ.ವಿ. ಜೋಶಿ ತಮ್ಮ ಭಾಷಣದಲ್ಲಿ ಕೌಟಿಲ್ಯನ ಒಳಗೊಳ್ಳುವಿಕೆಯ ಅಭಿವೃದ್ಧಿಯ ಪ್ರಕ್ರಿಯೆ ದುರ್ಬಲ ವರ್ಗದವರಿಗೆ ನೆರವಾಗಬೇಕೆಂದು ಸ್ಪಷ್ಟಪಡಿಸಿದ್ದಾರೆಂದು ಬೃಹತ್ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡುತ್ತ ತಿಳಿಸಿದರು.
ಇಂಥ ಅಪರೂಪದ ಕೃತಿ ರಚಿಸುವಲ್ಲಿ ಪ್ರಧಾನ ಪಾತ್ರ ವಹಿಸಿದ ಜೋಶಿ ಅವರನ್ನು ರಾಷ್ಟ್ರೀಯ ಸಮಾಜ ವಿಜ್ಞಾನ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಪ್ರೊ ಶೀಲಾ ರೈ ಶ್ಲಾಘಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ