ಮಂಗಳೂರು ವಿವಿ ಮಟ್ಟದ ಚರ್ಚಾ ಸ್ಪರ್ಧೆ: SDM B.Ed ಕಾಲೇಜು ಉಜಿರೆಗೆ ಪ್ರಥಮ ಸ್ಥಾನ

Upayuktha
0


ಉಜಿರೆ: ಮಂಗಳೂರು ವಿಶ್ವವಿದ್ಯಾನಿಲಯ ರಾಜ್ಯಶಾಸ್ತ್ರ ವಿಭಾಗ, ರಾಜ್ಯಶಾಸ್ತ್ರ ಸಂಘ ಮತ್ತು ರಾಜ್ಯಶಾಸ್ತ್ರ ಹಳೆವಿದ್ಯಾರ್ಥಿ ಸಂಘದ ನೇತೃತ್ವದಲ್ಲಿ ಮೇ 16 ರಂದು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಏರ್ಪಡಿಸಿದ್ದ “ಸಾಮಾಜಿಕ ಜಾಲತಾಣಗಳು ಪ್ರಜಾತಂತ್ರ ವ್ಯವಸ್ಥೆಯನ್ನು ಬಲಪಡಿಸುತ್ತದೆಯೋ ಅಥವಾ ದುರ್ಬಲಪಡಿಸುತ್ತದೆಯೋ” ಎಂಬ ವಿಷಯದಲ್ಲಿ ನಡೆದ ಚರ್ಚಾ ಸ್ಪರ್ಧೆಯಲ್ಲಿ ಎಸ್.ಡಿ.ಎಂ ಬಿ.ಎಡ್ ಕಾಲೇಜಿನ ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಫಾತಿಮಾತ್ ರಾಫಿಯ ಪ್ರಥಮ ಬಹುಮಾನ ಪಡೆದಿದ್ದಾರೆ. 


ಹಾಗೆಯೇ “ಭಾರತದಲ್ಲಿ ನಾಗರಿಕ ಪ್ರಜ್ಞೆ“ ಎಂಬ ವಿಷಯದಲ್ಲಿ ನಡೆದ ಭಾಷಣ ಸ್ಪರ್ಧೆಯಲ್ಲಿ ತೃತೀಯ ಬಹುಮಾನವನ್ನೂ ಪಡೆದಿದ್ದಾರೆ.


ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಮೋಹನ್ ಕುಮಾರ್ ವಿ ಮತ್ತು ಪ್ರಥಮ ಬಿ.ಇಡಿ. ಪ್ರಶಿಕ್ಷಣಾರ್ಥಿ ಸುದೀಪ್ ಮಹಾಂತೇಶ್ ಚೌಹಾಣ್ ಇವರು ಚರ್ಚಾಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.


ಇವರೆಲ್ಲರನ್ನೂ ಕಾಲೇಜಿನ ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top