ಗುಡ್ಡ ಕುಸಿತದಿಂದ ಮೃತಪಟ್ಟ ಕುಟುಂಬಕ್ಕೆ ಸಚಿವರು, ಮುಖಂಡರಿಂದ ಸಾಂತ್ವನ

Upayuktha
0


ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯೆಲ್ಲೆಡೆ ಕಳೆದೆರಡು ವಾರಗಳಿಂದ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಉಳ್ಳಾಲದ ವ್ಯಾಪ್ತಿಯಲ್ಲಿ ಶುಕ್ರವಾರ ತೀವ್ರ ಮಳೆಗೆ ಗುಡ್ಡ ಜರಿದು ಮನೆಯಲ್ಲಿದ್ದ ಮೂರು ಮಕ್ಕಳ ಸಮೇತ ನಾಲ್ವರು ದಾರುಣವಾಗಿ ಸಾವನ್ನಪ್ಪಿರುತ್ತಾರೆ. ಗುಡ್ಡ ಜರಿದು ಮೂವರ ಸಾವಿಗಿಡಾದ ಕೊಣಾಜೆಯ ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲ ಕಾಂತಪ್ಪ ಪೂಜಾರಿಯವರ ಮನೆಗೆ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಶಾಸಕ ಮಂಜುನಾಥ ಭಂಡಾರಿ ರವರು ಭೇಟಿ ನೀಡಿ ಸಂತ್ರಸ್ತರರಿಗೆ ಸಾಂತ್ವನ ಹೇಳಿದರು.


ಘಟನೆಯ ಕುರಿತು ಅಧಿಕಾರಿಗಳ ಜೊತೆ ಚರ್ಚಿಸಿ ಸಂಭಾವ್ಯ ಅನಾಹುತ ತಡೆಗೆ ತುರ್ತು ಕ್ರಮ ಕೈಗೊಳ್ಳುವ ಕುರಿತು ಸಮಾಲೋಚನೆ ಸಭೆ ನಡೆಸಿದರು. 


ಈ ಸಂದರ್ಭದಲ್ಲಿ ಶಾಸಕ ಐವನ್ ಡಿಸೋಜ, ದಕ್ಷಿಣ ಕನ್ನಡ ಜಿಲ್ಲಾ ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಜಿ ಎ ಭಾವ ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಸಂತೋಷ್, ದಕ್ಷಿಣ ಕನ್ನಡ ಜಿಲ್ಲೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಹಾಗೂ ಜಿಲ್ಲಾ ಆರೋಗ್ಯ ಅಧಿಕಾರಿ ಸೇರಿದಂತೆ ಅನೇಕ ಅಧಿಕಾರಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top