ಆಳ್ವಾಸ್: 2ನೇ ಹಂತದ ಉಚಿತ ನೇತ್ರ ತಪಾಸಣಾ ಶಿಬಿರ

Upayuktha
0



ಮೂಡುಬಿದಿರೆ: ಆಳ್ವಾಸ್ ಆಯುರ್ವೇದ ಕಾಲೇಜು ಆಸ್ಪತ್ರೆ, ಮಂಗಳೂರಿನ  ಎ.ಜೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ ಕೇಂದ್ರ ಮತ್ತು ವಿವಿಧ ಸಮುದಾಯಗಳ ಸಹಯೋಗದಲ್ಲಿ ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ 2ನೇ ಹಂತದ ಉಚಿತ ನೇತ್ರ ತಪಾಸಣಾ ಶಿಬಿರ ಆಯೋಜಿಸಿತು.


ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೋದ ವರ್ಷ 9 ಬಾರಿ ಉಚಿತ ನೇತ್ರ ತಪಾಸಣಾ ಶಿಬಿರಗಳು ಬೇರೆ ಬೇರೆ ಸಮುದಾಯದ ಜೊತೆಯಲ್ಲಿ ಸೇರಿಕೊಂಡು ಆಳ್ವಾಸ್ ನಡೆಸಿದೆ. ಈ ಉಚಿತ ನೇತ್ರ ತಪಾಸಣಾ ಶಿಬಿರ ನಿರಂತರ ನಡೆದು ಬಹಳಷ್ಟು ಜನರಿಗೆ ಪ್ರಯೋಜನಕಾರಿಯಾಗಲಿ ಎಂದು ಆಶಿಸಿದರು. ಕಾರ್ಯಕ್ರಮಕ್ಕೆ ಸಹಕರಿಸಿದ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಕೇಂದ್ರದ ವೈದ್ಯರಿಗೆ ಹಾಗೂ ಸಹಕಾರ ನೀಡಿದ ವಿವಿಧ ಸಮುದಾಯಗಳ ಮುಖಂಡರಿಗೆ ಕೃತಜ್ಞತೆ ಸಲ್ಲಿಸಿದರು.


ಎರಡು ಹಂತದ ಶಿಬಿರದಲ್ಲಿ ಒಟ್ಟು 237 ಮಂದಿ ಪಾಲ್ಗೊಂಡು, 116 ಮಂದಿ ಉಚಿತ ಕನ್ನಡಕ ಪಡೆಯಲು, 26 ಮಂದಿ ಶಸ್ತ್ರಚಿಕಿತ್ಸೆಗೆ ಹೆಸರು ನೋಂದಾಯಿಸಿಕೊಂಡರು.


ಕಾರ್ಯಕ್ರಮದಲ್ಲಿ ಎ.ಜೆ ವೈದ್ಯಕೀಯ ಮಹಾವಿದ್ಯಾಲಯ, ಸಂಶೋಧನಾ ಕೇಂದ್ರದ ಸಹ ಪ್ರಾಧ್ಯಪಕಿ ಡಾ. ನಿಕಿತಾ ಪಟಾರೆ, ವಕೀಲೆ ಶ್ವೇತಾ ಜೈನ್, ಜೈನ್ ಮಿಲನ್ ಮೂಡುಬಿದಿರೆ ಕೋಶಾಧಿಕಾರಿ ಪುಷ್ಪರಾಜ್ ಜೈನ್, ಆಳ್ವಾಸ್ ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ. ಸಜಿತ್ ಎಂ, ನೂರಾನಿ ಮಸ್ಜಿದ್ ಅಧ್ಯಕ್ಷ ಅಬುಲಾಲ್ ಪುತ್ತಿಗೆ, ಸೌಹಾರ್ದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಮೊಹಮ್ಮದ್ ಶರೀಫ್, ಉದ್ಯಮಿ ಜೈನುದ್ದೀನ್, ಎಸ್‌ಕೆಎಸ್‌ಎಸ್‌ಎಫ್ ದಕ್ಷಿಣ ಕನ್ನಡ(ಪಶ್ಚಿಮ ವಲಯ) ಉಪಾಧ್ಯಕ್ಷ ಅಬ್ದುಲ್ ಅಝಿಝ್ ಮಲಿಕ್,  ಶ್ರೀ ಅಮೃತೇಶ್ವರ ಪ್ರತಿಷ್ಠಾನ(ರಿ.) ಅಧ್ಯಕ್ಷ ದೀಪಕ್ ಶೆಟ್ಟಿ ಲಿಂಗಮಾರುಗುತ್ತು, ಗುರುಪುರ ಬಂಟರ ಮಾತೃ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ ಶೆಡ್ಡೆ ಹೊಸಲಕ್ಕೆ, ಮೂಡುಬಿದಿರೆ ಪ್ರೆಸ್ ಕ್ಲಬ್ ಅಧ್ಯಕ್ಷ ಸೀತರಾಮ್ ಆಚರ‍್ಯ ಹಾಗೂ ಇನ್ನಿತರ ಮುಖಂಡರು ಇದ್ದರು. ಆಳ್ವಾಸ್ ಆಯುರ್ವೇದ ಕಾಲೇಜು ಆಸ್ಪತ್ರೆಯ ಅಧೀಕ್ಷಕ ಡಾ. ಮಂಜುನಾಥ್ ಭಟ್ ಕಾರ್ಯಕ್ರಮವನ್ನು ಸ್ವಾಗತಿಸಿ, ಡಾ. ವಿಕ್ರಂ ವಂದಿಸಿ, ಕಿರಿಯ ವೈದ್ಯ ಡಾ. ಸುಮಂತ್ ನಿರೂಪಿಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top