ಆಪರೇಶನ್ ಸಿಂದೂರ್: ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ವಿಶೇಷ ಭಾಷಣ

Upayuktha
0


ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 8 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪಹಲ್ಗಾಮ್‌ನಲ್ಲಿ ನಡೆದ ಬರ್ಬರ ಭಯೋತ್ಪಾದಕ ದಾಳಿಯ ನಂತರ ಭಾರತ ಆರಂಭಿಸಿದ ಆಪರೇಷನ್ ಸಿಂಧೂರ್ ನಂತರ ಮೋದಿ ಅವರು ಈ ವಿಶೇಷ ಹಾಗೂ ಮಹತ್ವದ ಭಾಷಣ ಮಾಡಲಿದ್ದಾರೆ.


ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 25 ಭಾರತೀಯರು ಮತ್ತು ಒಬ್ಬ ನೇಪಾಳಿ ನಾಗರಿಕ ಸಾವನ್ನಪ್ಪಿದ್ದರು. ಪ್ರತೀಕಾರದ ಕ್ರಮವಾಗಿ ಭಾರತವು ಪಾಕಿಸ್ತಾನದಾದ್ಯಂತ ಹಲವಾರು ಭಯೋತ್ಪಾದನೆ ಮತ್ತು ಮಿಲಿಟರಿ ಸ್ಥಳಗಳನ್ನು ನಾಶಪಡಿಸಿದ್ದು, 100 ಕ್ಕೂ ಹೆಚ್ಚು ಭಯೋತ್ಪಾದಕರನ್ನು ಕೊಂದು ಹಾಕಿದೆ.



ಇಂದು (ಮೇ 12) ಮಧ್ಯಾಹ್ನ ಪ್ರಧಾನಿ ನರೇಂದ್ರ ಮೋದಿ ಅವರ ನವದೆಹಲಿಯ ನಿವಾಸದಲ್ಲಿ ಉನ್ನತ ಮಟ್ಟದ ಸಭೆ ನಡೆಯಿತು. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಮೂರು ಸಶಸ್ತ್ರ ಪಡೆಗಳ ಮುಖ್ಯಸ್ಥರು ಮತ್ತು ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top