ಆಪರೇಷನ್ ಸಿಂದೂರ್ ಯಶಸ್ವಿ: ಮಾಜಿ ಶಾಸಕ ಸೋಮಲಿಂಗಪ್ಪ ನೇತೃತ್ವದಲ್ಲಿ ತಿರಂಗಾಯಾತ್ರೆ

Upayuktha
0


ಬಳ್ಳಾರಿ: ಆಪರೇಷನ್ ಸಿಂದೂರ ಕಾರ್ಯಾಚರಣೆ ಯಶಸ್ವಿಯಾದ ಹಿನ್ನೆಲೆಯಲ್ಲಿ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರ ಹಾಗೂ ಪಕ್ಷದ ಕರೆಯ ಮೇರೆಗೆ ದೇಶಾದ್ಯಂತ ತಿರಂಗಾ ಯಾತ್ರೆ ನಡೆಸಲು ಯೋಜಿಸಿರುವ ಹಿನ್ನೆಲೆಯಲ್ಲಿ ಸಿರುಗುಪ್ಪದಲ್ಲಿ ನಿವೃತ್ತ ಯೋಧರು, ವಕೀಲರು, ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ಕಾರ್ಯಕರ್ತರುಗಳ ನೇತೃತ್ವದಲ್ಲಿ 200 ಅಡಿ ಉದ್ದದ ಬೃಹತ್ ತಿರಂಗಾ ಯಾತ್ರೆ ನಡೆಸಲಾಯಿತು. 


ಪೆಹಲ್ಗಾಮ್ ಉಗ್ರರ ದಾಳಿಗೆ ಪ್ರತಿಕಾರವಾಗಿ ಉಗ್ರ ರಕ್ಕಸರ ವಿರುದ್ಧದ ಬೃಹತ್ ಕಾರ್ಯಾಚರಣೆ ಆಪರೇಷನ್ ಸಿಂದೂರದ ಮೂಲಕ ಉಗ್ರರನ್ನು ಸದೆಬಡಿದಿರುವ ವೀರ ಯೋಧರಿಗೆ ನೈತಿಕ ಸ್ಥೈರ್ಯ ಹಾಗೂ ಬೆಂಬಲ ನೀಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯ. ಅಲ್ಲದೇ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಯುದ್ಧ ಆರಂಭವಾಗುವ ಮುನ್ನವೇ ಭಾರತೀಯ ಸೇನೆಗೆ ಸಂಪೂರ್ಣ ಸ್ವಾತಂತ್ರ್ಯ ನೀಡಿ ಉಗ್ರ ಪೋಷಕ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿರುವ ಹಿನ್ನೆಲೆಯಲ್ಲಿ ಮುಂದಿನ ಎಲ್ಲಾ ಕಾರ್ಯಾಚರಣೆಗೂ ಬೆಂಬಲ ನೀಡುವ ದೃಷ್ಟಿಯಿಂದ ರಾಜ್ಯಾದ್ಯಂತ ಬಿಜೆಪಿ ಕರ್ನಾಟಕ ವತಿಯಿಂದ ತಿರಂಗಾ ಯಾತ್ರೆ ನಡೆಯಲಿದೆ.


ಈ ಸಂದರ್ಭದಲ್ಲಿ ಪೂಜ್ಯ ಗುರು ಶ್ರೀ ಶ್ರೀ ಬಸವಭೂಷಣ ಸ್ವಾಮೀಜಿಯವರು,  ಮಾಜಿ ಶಾಸಕ ಎಂ.ಎಸ್ ಸೋಮಲಿಂಗಪ್ಪ, ಜಿಲ್ಲಾ ಬಿಜೆಪಿ ಅಧ್ಯಕ್ಷ ಅನಿಲ್ ಕುಮಾರ್ ಮೋಕಾ, ಸಿರುಗುಪ್ಪ ಬಿಜೆಪಿ ಮಂಡಲ ಅಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಐನಾಥರೆಡ್ಡಿ, ಎಂ.ಎಸ್.ಸಿದ್ದಪ್ಪ, ಜಿಲ್ಲಾಧ್ಯಕ್ಷರು, ಬಿಜೆಪಿ ಯುವ ಮೋರ್ಚಾ, ಸೇರಿದಂತೆ ನಿವೃತ್ತಿ ಯೋಧರು, ನಗರಸಭೆ ಸದಸ್ಯರು, ಆಟೋ ಚಾಲಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.



  ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top