ಸಹೋದರಿಯರ ಸಿಂದೂರ ಅಳಿಸಿದವರಿಗೆ ಆಪರೇಷನ್ ಸಿಂದೂರ ಉತ್ತರ: ಶಾಸಕ ರಾಜೇಶ್ ನಾಯ್ಕ್

Upayuktha
0


ಬಂಟ್ವಾಳ: ಕಾಶ್ಮೀರದ ಪೆಹಲ್ ಗಾಂವ್ ನಲ್ಲಿ 26 ಮಂದಿಯ ಹತ್ಯೆ ಮಾಡಿದ ನರರೂಪದ ರಾಕ್ಷಸಲು ನಮ್ಮ ಭಾರತೀಯ ಸಹೋದರಿಯರ ಸಿಂದೂರವನ್ನು ಅಳಿಸಿಹಾಕಿದ ಘೋರ ಕೃತ್ಯಕ್ಕೆ ಭಾರತ ತಕ್ಕ ಶಾಸ್ತಿ ಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ದಿಟ್ಟ ಉತ್ತರ ನೀಡಿದೆ ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಕಾರ್ಯಾಚರಣೆ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.


ಭಾರತೀಯ ಸೈನಿಕರು ಪಾಕಿಸ್ತಾನದ ಉಗ್ರಗಾಮಿ ನೆಲೆಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಿ ಮರಣದಂಡನೆಯನ್ನೇ ನೀಡಿದೆ. ಉಗ್ರಗಾಮಿ ಕೃತ್ಯ ಎಸಗುವವರಿಗೆ ಭಾರತ ತಕ್ಕ ಶಾಸ್ತಿ ಮಾಡುತ್ತದೆ, ದಿಟ್ಟ ಉತ್ತರ ನೀಡುತ್ತದೆ ಎಂಬುದನ್ನು ಜಗತ್ತಿಗೆ ಸಾರಿ ಹೇಳಿದೆ. ಭಾರತದಲ್ಲಿ ಆತಂಕ ಸೃಷ್ಟಿಸುವ ಉಗ್ರಗಾಮಿ ಕೃತ್ಯಗಳನ್ನು ಬೆಂಬಲಿಸುತ್ತಾ, ಕುಮ್ಮಕ್ಕು ನೀಡುವವರಿಗೂ ಇದು ಎಚ್ಚರಿಕೆಯ ಸಂದೇಶವಾಗಿದೆ. ಭಾರತ ಸರಕಾರ ಕೈಗೊಳ್ಳುವ ಯಾವುದೇ ಕ್ರಮಗಳಿಗೆ ಹಾಗೂ ದೇಶದ ರಕ್ಷಣೆ, ಸುರಕ್ಷತೆ ಹಾಗೂ ಆತಂಕವಾದವನ್ನು ಮಟ್ಟ ಹಾಕುವ ಯಾವುದೇ ಕೆಲಸ ಕಾರ್ಯಗಳಿಗೆ ಭಾರತೀಯರೆಲ್ಲರೂ ಬೆಂಬಲಿಸುವ ಮೂಲಕ ಸುಭದ್ರ ರಾಷ್ಟ್ರನಿರ್ಮಾಣಕ್ಕೆ ಕೈಜೋಡಿಸಬೇಕು. ಭಾರತ ಶಕ್ತಿಶಾಲಿ ರಾಷ್ಟ್ರವಾಗಿದ್ದು, ಇದನ್ನು ಬುಡಮೇಲು ಮಾಡುವವರಿಗೆ ತಕ್ಕ ಪಾಠ ಕಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಭಾರತದ ಶೌರ್ಯಭರಿತ ಸೈನ್ಯಕ್ಕೆ ನಾಗರಿಕರ ಪರವಾಗಿ ಅಭಿನಂದಿಸುತ್ತಿದ್ದೇನೆ ಎಂದವರು ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top