ವಿಕಲಚೇತನರು ಸರ್ಕಾರಿ ಸೌಲಭ್ಯ ಪಡೆದು ಅಭಿವೃದ್ಧಿಯಾಗಬೇಕು: ಗೋವಿಂದಪ್ಪ

Upayuktha
0


ಬಳ್ಳಾರಿ: ವಿಶೇಷಚೇತನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಸ್ವಾವಲಂಬಿ ಜೀವನ ನಡೆಸಬೇಕು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಧಿಕಾರಿ ಗೋವಿಂದಪ್ಪ ಅವರು ಹೇಳಿದರು.


ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಅವರಣದಲ್ಲಿ ಶುಕ್ರವಾರ ಆಯೋಜಿಸಿದ್ದ “ಭಾರತ ಸುಗಮ್ಯ ಯಾತ್ರಾ” ಅರಿವು ಮೂಡಿಸುವ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.


ವಿಶೇಷಚೇತನರು ಸರ್ಕಾರಿ ಕಚೇರಿಗಳಲ್ಲಿ ಅವರಿಗಿರುವ ಸೌಲಭ್ಯಗಳ ಮಾಹಿತಿ ಹೊಂದಬೇಕು. ಮುಖ್ಯವಾಗಿ ಅವರಿಗೆ ಯಾವುದೇ ಅಡೆತಡೆ ಇಲ್ಲದಂತೆ ಓಡಾಡಲು ಪೂರಕ ಪರಿಸರ ಕಲ್ಪಿಸಿಕೊಟ್ಟು ಮುಖ್ಯವಾಹಿನಿಗೆ ಬರುವಂತೆ ನೋಡಿಕೊಳ್ಳಬೇಕು ಎಂದರು.


  “ಭಾರತ ಸುಗಮ್ಯ ಯಾತ್ರಾ” ಅರಿವು ಮೂಡಿಸುವ ಜಾಥಾಗೆ ಜಿಲ್ಲಾಧಿಕಾರಿಗಳ ಕಚೇರಿಯ ತಹಶೀಲ್ದಾರರಾದ ಗೌಸಿಯಾ ಬೇಗಂ ಅವರು ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯ ಸಿಬಂದ್ದಿಗಳು ಸೇರಿದಂತೆ ವಿಶೇಷಚೇತನರು, ಹಿರಿಯ ನಾಗರೀಕರು ಮತ್ತು ಇತರರು ಭಾಗವಹಿಸಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top