ಮಂಗಳೂರಿನಲ್ಲಿ ಪೊಲೀಸ್‌ ಹೈ ಅಲರ್ಟ್‌, ರಾತ್ರಿ 9.30ರೊಳಗೆ ಎಲ್ಲ ಬಂದ್‌

Chandrashekhara Kulamarva
0


ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ  ಕೊಲೆಯ ಬಳಿಕ ಪ್ರತೀಕಾರದ ಹತ್ಯೆ ಬಗ್ಗೆ  ಸೋಷಿಯಲ್‌ ಮೀಡಿಯಾಗಳಲ್ಲಿ ಪೋಸ್ಟ್​​ಗಳು ಶೇರ್‌ ಆಗುತ್ತಿದ್ದು, ಇದನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು  ಮಂಗಳೂರು ನಗರದಾದ್ಯಂತ ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. 


ಸೋಮವಾರ ರಾತ್ರಿ 9.30ರೊಳಗೆ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಲಾಗಿದೆ. ಹೋಟೆಲ್, ಪಬ್, ಬಾರ್​ಗಳು, ಫುಟ್​ಪಾತ್ ವ್ಯಾಪಾರವನ್ನು ರಾತ್ರಿ 9.30 ರೊಳಗೆ ಬಂದ್ ಮಾಡಿಸಲಾಗುತ್ತಿದೆ. ಇನ್ನೂ ಕೆಲವು ದಿನ ಇದನ್ನೇ ಮುಂದುವರಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.


ಸುಹಾಸ್ ಶೆಟ್ಟಿ ಹತ್ಯೆ ಬಳಿಕ ಅದೇ ದಿನ  ರಾತ್ರಿ ರೌಡಿಶೀಟರ್ ಕೋಡಿಕೆರೆ ಲೋಕೇಶ್ ಹಾಗೂ ಗ್ಯಾಂಗ್​ ಪ್ರತೀಕಾರಕ್ಕೆ ಯತ್ನಿಸಿ ವಿಫಲವಾಗಿತ್ತು. ಕುಂಟಿಕಾನ ಬಳಿ ಉಳ್ಳಾಲ ನಿವಾಸಿ ಲುಕ್ಮಾನ್ ಎಂಬ ಮೀನಿನ ವ್ಯಾಪಾರಿಯನ್ನು ಅಟ್ಟಾಡಿಸಿ ಕೊಲೆಗೆ ಯತ್ನಿಸಿತ್ತು. ಈ ಸಂಬಂಧ ಕಾವೂರು ಪೊಲೀಸರು ಲೋಕೇಶ್​​ನನ್ನು ಬಂಧಿಸಿದ್ದಾರೆ. 


ಸುಹಾಸ್‌ ಹತ್ಯೆಯ ಬಳಿಕ ಮಂಗಳೂರಿನ ಮೂರು ಕಡೆ ಚಾಕು ಇರಿತ ಪ್ರಕರಣಗಳು ನಡೆದಿದ್ದು, 7 ಮಂದಿಯನ್ನು ಬಂಧಿಸಲಾಗಿತ್ತು. ಈ ಎಲ್ಲ ಬೆಳವಣಿಗೆ ಮಧ್ಯೆ ಮಂಗಳೂರಿನಲ್ಲಿ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲ್‌ ಅವರನ್ನು ಹತ್ಯೆ ಮಾಡುವುದಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ವೈರಲ್ ಆಗಿತ್ತು. ಮೇ 5 ರಂದು ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುತ್ತೇವೆ ಎಂದು ಭರತ್ ಕುಮ್ಡೇಲ್ ಹೆಸರು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್ ವೈರಲ್ ಆದ ಬಳಿಕ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top