ಪುತ್ತೂರು- ಮುರದಲ್ಲಿ ಕಾರಿಗೆ ಗುದ್ದಿದ ಖಾಸಗಿ ಬಸ್ಸು, ಮೂವರಿಗೆ ಗಂಭೀರ ಗಾಯ

Upayuktha
1 minute read
0


ಪುತ್ತೂರು: ರಾಷ್ಟ್ರೀಯ ಹೆದ್ದಾರಿ ಪುತ್ತೂರು ಸಮೀಪದ ನೆಹರು ನಗರ ಸಮೀಪ ಮುರ ಎಂಬಲ್ಲಿ ಮೇ 27ರಂದು ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.


ಗಾಯಾಳುಗಳನ್ನು ಅಂಡೆಪುಣಿ ನಿವಾಸಿ ಈಶ್ವರ ಭಟ್, ಅವರ ಪುತ್ರಿ ಅಪೂರ್ವ ಹಾಗೂ ಅಪೂರ್ವ ಅವರ ಮಗು ಎಂದು ಗುರುತಿಸಲಾಗಿದೆ.


ಪುತ್ತೂರಿನಿಂದ ಕೆದಿಲ ಕಡೆಗೆ ಹೋಗುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದು ಬಸ್ಸು ಗುದ್ದಿದೆ ಎನ್ನಲಾಗಿದೆ. ಅಪಘಾತದಲ್ಲಿ ಕಾರು ನುಜ್ಜುಗುಜ್ಜಾಗಿದ್ದು ಸ್ಥಳಕ್ಕೆ ಆಗಮಿಸಿ ಪುತ್ತೂರು ಸಂಚಾರ ಪೋಲಿಸರು ಪರಿಶೀಲನೆ ನಡೆಸುತ್ತಿದ್ದಾರೆ.


ಈಶ್ವರ ಭಟ್ ಅವರ ಮನೆಯಲ್ಲಿ ಇಂದು ಶ್ರಾದ್ಧ ಕಾರ್ಯಕ್ರಮವಿತ್ತು. ಅದರಲ್ಲಿ ಭಾಗವಹಿಸಲು ಮಗಳು ಅಪೂರ್ವ ಮತ್ತು ಮೊಮ್ಮಗಳು ಬೆಂಗಳೂರಿನಿಂದ ಪುತ್ತೂರಿಗೆ ಬಂದಿದ್ದರು. ಈಶ್ವರ ಭಟ್ ತಮ್ಮ ವ್ಯಾಗನರ್ ಕಾರಿನಲ್ಲಿ ಅವರನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.


ಈ ಸಂದರ್ಭದಲ್ಲಿ ಪುತ್ತೂರಿನಿಂದ ಮಂಗಳೂರಿಗೆ ಅತಿ ವೇಗದಿಂದ ಚಲಿಸುತ್ತಿದ್ದ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ. ಆ ರಭಸಕ್ಕೆ ಬಸ್ಸು ಕಾರನ್ನು ಕೆಲವು ಮೀಟರ್ ಗಳಷ್ಟು ದೂರಕ್ಕೆ ತಳ್ಳಿಕೊಂಡು ಹೋಗಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top