ಮಂಗಳೂರಿನಲ್ಲಿ ಇಂದು ಸಂಜೆ ಆರು ಗಂಟೆವರೆಗೆ ನಿಷೇಧಾಜ್ಞೆ

Upayuktha
0



ಮಂಗಳೂರು: ಹಿಂದೂ ಕಾರ್ಯಕರ್ತ ಎನ್ನಲಾದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ಖಂಡಿಸಿ ಹಿಂದೂ ಸಂಘಟನೆಗಳ ಕಾರ್ಯ ಕರ್ತರು ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ವಿಶ್ವ ಹಿಂದೂ ಪರಿಷತ್  ದಕ್ಷಿಣ ಕನ್ನಡ ಜಿಲ್ಲಾ ಬಂದ್‌ಗೆ ಕರೆ ನೀಡಿದೆ.  ಮುಂಜಾಗ್ರತಾ ಕ್ರಮವಾಗಿ ಮಂಗಳೂರಿನಲ್ಲಿ ಪೊಲೀಸರು ಶುಕ್ರವಾರ (ಇಂದು)  ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ. 

ನಗರದಲ್ಲಿ ಈಗಾಗಲೇ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲು ಹಾಗೂ ವ್ಯಾಪಾರ ವಹಿವಾಟು, ವಾಹನ ಸಂಚಾರ ಬಂದ್ ಗೆ ಕರೆ ನೀಡಲಾಗಿದೆ. ಸುಹಾಶ್ ಸೆಟ್ಟಿ ಸೇರಿದಂತೆ ಐದು ಮಂದಿ ಕಾರಿನಲ್ಲಿ ತೆರಳುತ್ತಿರುವಾಗ  ಜಿಹಾದಿ ಇಸ್ಲಾಮಿಕ್ ಭಯೋತ್ಪಾದಕ ಮುಸಲ್ಮಾನರು ಸುಹಾಸ್ ಹತ್ಯೆ ಮಾಡಿದ್ದಾರೆ ಎಂದು ಶರಣ್ ಪಂಪ್‌ವೆಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಲ್ಲಿ ನಿಷೇಧಿತ ಪಿಎಫ್ಐ ಕೈವಾಡ ಇದೆ ಎಂದು ಆರೋಪಿಸಿದ್ದಾರೆ. 


ಸುಹಾಸ್ ಶೆಟ್ಟಿ ಮೃತದೇಹವನ್ನು ಎಜೆ ಆಸ್ಪತ್ರೆಯಲ್ಲಿ ಇಡಲಾಗಿದೆ. ಎ.ಜೆ.ಆಸ್ಪತ್ರೆ ಶವಾಗಾರಕ್ಕೆ ಆಗಮಿಸಿದ ಎಡಿಜಿಪಿ ಆರ್. ಹಿತೇಂದ್ರ  ಕಾನೂನು ಸುವ್ಯವಸ್ಥೆ ಪರಿಶೀಲಿಸಿದ್ದಾರೆ. ಮಂಗಳೂರು ಕಮಿಷನರ್ ಅನುಪಮ್ ಅಗರ್‍ವಾಲ್ ರಿಂದ ಮಾಹಿತಿ ಪಡೆದ ಎಡಿಜಿಪಿ ಹಿತೇಂದ್ರ, ಹೆಚ್ಚುವರಿ ಪೊಲೀಸ್ ನಿಯೋಜನೆಗೆ ಸೂಚಿಸಿದ್ದಾರೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top