ಮಳೆ ಅನಾಹುತ: ಕೂಡಲೇ ಜನರ ನೆರವಿಗೆ ಧಾವಿಸಿ: ಕಾಂಗ್ರೆಸ್ ಸರಕಾರಕ್ಕೆ ಶಾಸಕ ಕಾಮತ್ ಆಗ್ರಹ

Upayuktha
0


ಮಂಗಳೂರು: ಹಲವಾರು ವರ್ಷಗಳ ನಂತರ ಮುಂಗಾರು ಮಾರುತಗಳು ಸಾಕಷ್ಟು ಮುಂಚಿತವಾಗಿಯೇ ಕರಾವಳಿಯನ್ನು ಪ್ರವೇಶಿಸಿದ್ದು, ನಮ್ಮ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿ ಜನಸಾಮಾನ್ಯರು ಅಪಾರ ನಷ್ಟ ಅನುಭವಿಸುವಂತಾಗಿದ್ದರಿಂದ ರಾಜ್ಯ ಕಾಂಗ್ರೆಸ್ ಸರ್ಕಾರ ಕೂಡಲೇ ನೆರವಿಗೆ ಧಾವಿಸಬೇಕೆಂದು ಶಾಸಕ ವೇದವ್ಯಾಸ ಕಾಮತ್ ರವರು ಆಗ್ರಹಿಸಿದರು.


ಈ ಹಿಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರವು ಮಳೆಹಾನಿಯ ಸಂದರ್ಭದಲ್ಲಿ ಸಂತ್ರಸ್ತರು ಮರಳಿ ಬದುಕು ಕಟ್ಟಿಕೊಳ್ಳಲು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಪರಿಹಾರ ನೀಡುತ್ತಿತ್ತು. ಅದರಂತೆ ಮನೆಗೆ ನೀರು ನುಗ್ಗಿದ್ದರೆ 10 ಸಾವಿರ, ಭಾಗಶಃ ಹಾನಿಯಾಗಿದ್ದರೆ 3 ಲಕ್ಷ, ಮತ್ತು ಸಂಪೂರ್ಣ ಹಾನಿಯಾಗಿದ್ದರೆ 5 ಲಕ್ಷ ಪರಿಹಾರ ನೀಡುತ್ತಿತ್ತು. ಆದರೆ ನಂತರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರಕ್ಕೆ ಜನ ಸಾಮಾನ್ಯರ ಬಗ್ಗೆ ಕಾಳಜಿಯೇ ಇಲ್ಲವಾಗಿದ್ದು ಪರಿಹಾರ ಮೊತ್ತವನ್ನು ಗಣನೀಯವಾಗಿ ಇಳಿಸಿದ ಪರಿಣಾಮ ಇದೀಗ ಮನೆಗೆ ನೀರು ನುಗ್ಗಿದರೆ ಪರಿಹಾರವೇ ಇಲ್ಲ, ಭಾಗಶಃ ಹಾನಿಯಾದರೆ ಕೇವಲ 50 ಸಾವಿರದಿಂದ 1 ಲಕ್ಷ, ಮತ್ತು ಸಂಪೂರ್ಣ ಹಾನಿಯಾಗಿದರೂ ಕೇವಲ 1.5 ಲಕ್ಷ ಪರಿಹಾರ ನೀಡಲಾಗುತ್ತಿದೆ. ಇದರಿಂದ ಅನೇಕ ಬಡ ಕುಟುಂಬಗಳು ತೀವ್ರ ತೊಂದರೆಗೀಡಾಗಿವೆ ಎಂದರು.


ರಾಜ್ಯ ಸರ್ಕಾರ ಕಳೆದ ಮಳೆಗಾಲದ ಪರಿಹಾರ ವಿಷಯದಲ್ಲಿ ನಮ್ಮ ಜಿಲ್ಲೆಯನ್ನು ಸಂಪೂರ್ಣ ಕಡೆಗಣಿಸಿತ್ತು. ಈ ಬಾರಿ ಈಗಾಗಲೇ ಹಲವು ಮನೆಗಳಿಗೆ ನೀರು ನುಗ್ಗಿ ಬೆಲೆಬಾಳುವ ವಸ್ತುಗಳ ಸಹಿತ ವಿದ್ಯುತ್ ಉಪಕರಣಗಳು ಹಾನಿಗೀಡಾಗಿವೆ. ಕೆಲವೆಡೆ ಮನೆಗಳು ಸಂಪೂರ್ಣ ಹಾನಿಗೀಡಾಗಿವೆ. ಹಾಗಾಗಿ ಈ ವರ್ಷವೂ ಅದೇ ನಿರ್ಲಕ್ಷ್ಯ ಧೋರಣೆಯನ್ನು ಮುಂದುವರಿಸದೇ ಹಿಂದಿನ ಬಿಜೆಪಿ ಸರ್ಕಾರದ ಮಾದರಿಯಲ್ಲೇ ಪರಿಹಾರ ಒದಗಿಸಿ ಸಂತ್ರಸ್ತರ ನೆರವಿಗೆ ಧಾವಿಸಬೇಕು ಎಂದು ಶಾಸಕರು ಆಗ್ರಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top