ಎಸ್ಸೆಸ್ಸೆಲ್ಸಿ ಪರೀಕ್ಷೆ-1 ಫಲಿತಾಂಶ: ಅಗ್ರ ಸ್ಥಾನಗಳಲ್ಲಿ ದಕ್ಷಿಣ ಕನ್ನಡ, ಉಡುಪಿ

Upayuktha
0



ಬೆಂಗಳೂರು: 2024-25ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದ್ದು, ಶೇ. 66.14 ಫಲಿತಾಂಶ ಬಂದಿದೆ. ಸರ್ಕಾರಿ ಶಾಲೆಗಳಲ್ಲಿ ಅತಿ ಹೆಚ್ಚು ಫಲಿತಾಂಶ ದಾಖಲಾಗಿದೆ. ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದಾರೆ. ದಕ್ಷಿಣ ಕನ್ನಡ (91.12%) ಪರಥಮ ಸ್ಥಾನ ಗಳಿಸಿದ್ದರೆ ಉಡುಪಿ ದ್ವಿತೀಯ (89.96%) ಸ್ಥಾನ ಪಡೆದುಕೊಂಡಿದೆ. ಉತ್ತರ ಕನ್ನಡ (83.19%) ತೃತೀಯ ಸ್ಥಾನದಲ್ಲಿದೆ. ಕಲಬುರಗಿಗೆ ಕೊನೆ ಸ್ಥಾನ (42.43 %) ಲಭಿಸಿದೆ.  22 ಮಂದಿ 625 ಕ್ಕೆ 625 ಅಂಕ ಗಳಿಸಿ ಪ್ರಥಮ ರ‍್ಯಾಂಕ್ ಪಡೆದಿದ್ದಾರೆ. ವೆಬ್‌ಸೈಟ್‌ನಲ್ಲಿ (https://karresults.nic.in) ಫಲಿತಾಂಶ ಲಭ್ಯವಿದೆ. 


ಈ ಬಾರಿ ಒಟ್ಟು 144 ಶಾಲೆಗಳಲ್ಲಿ ಶೂನ್ಯ ಫಲಿತಾಂಶ ದಾಖಲಾಗಿದೆ. ಸರ್ಕಾರಿ ಶಾಲೆ - 6,  ಅನುದಾನಿತ ಶಾಲೆ - 30, ಅನುದಾನ ರಹಿತ ಶಾಲೆ - 108 ಸೊನ್ನೆ ಫಲಿತಾಂಶ ಪಡೆದಿವೆ. ಶೇಕಡಾ 74.00 ರಷ್ಟು ವಿದ್ಯಾರ್ಥಿನಿಯರು ತೇರ್ಗಡೆಯಾದರೆ, ಶೇಕಡಾ 58.07 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಒಟ್ಟು 224900 (67.05%) ನಗರ ಪ್ರದೇಶದ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 298175 (65.47%) ಗ್ರಾಮಾಂತರ ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top