ವಿವೇಕಾನಂದ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿ ಸಂಘದ ದಿನಾಚರಣೆ

Upayuktha
0


ಪುತ್ತೂರು: ಯಶಸ್ವಿಯಾಗಿ ಶಿಕ್ಷಣ ಪೂರೈಸಿದ ವಿದ್ಯಾರ್ಥಿಗಳನ್ನು  ಹಿರಿಯ ವಿದ್ಯಾರ್ಥಿ ಸಂಘಕ್ಕೆ ಸ್ವಾಗತಿಸುವುದು ಒಂದು ಭಾವನಾತ್ಮಕ ಕ್ಷಣ. ವಿದ್ಯಾರ್ಥಿಗಳು ಸಾಧ್ಯವಾದಷ್ಟು ಉನ್ನತ ಶಿಕ್ಷಣವನ್ನು ಪಡೆಯಬೇಕು. ನಾವು ಭಾವನೆಗಳನ್ನು ನಿಯಂತ್ರಿಸಿ ಜೀವನೋತ್ಸಾಹದಿಂದ ಬದುಕಬೇಕು ಹೊರತು ನಿಸ್ತೇಜರಾಗಿ ಅಲ್ಲ.ನಾವು ಪಡೆದ ಉದ್ಯೋಗದಲ್ಲಿ ಕ್ರಿಯಾಶೀಲರಾಗಿ ಉತ್ಕೃಷ್ಟತೆ  ತೋರಬೇಕು. ಜೀವನವನ್ನು ಒಳ್ಳೆಯ ರೀತಿಯಲ್ಲಿ ರೂಪಿಸಿಕೊಳ್ಳಲು ವಿದ್ಯಾರ್ಥಿ ಜೀವನ ಸಕಾಲ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ, ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಪ್ರಕಾಶ್ ಮೂಡಿತ್ತಾಯ ನುಡಿದರು.


ಪುತ್ತೂರಿನ ವಿವೇಕಾನಂದ ಕಲಾ, ವಿಜ್ಞಾನ, ವಾಣಿಜ್ಯ ಕಾಲೇಜು ಇಲ್ಲಿ ಹಿರಿಯ ವಿದ್ಯಾರ್ಥಿ ಸಂಘ ಮತ್ತು ಐಕ್ಯೂಎಸಿಯ ಸಹಯೋಗ ದಲ್ಲಿ ನಡೆದ ಅಂತಿಮ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಹಿರಿಯ ವಿದ್ಯಾರ್ಥಿಸಂಘದ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ , ಒಳ್ಳೆಯ ಚಿಂತನೆಯನ್ನಿಟ್ಟುಕೊಂಡು ಬದುಕು ಸಾಗಿಸುವುದು ಮುಖ್ಯವಾಗಿದೆ. ಸುವಿಚಾರಗಳೆಂಬ ತೈಲದಿಂದ ಬೆಳಗುವ ಬತ್ತಿಯಂತೆ ನಾವು ಇರಬೇಕು ಎಂದು ಆಶಿಸಿದರು.


ಅರ್ಥಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಪಿ.ಕೆ ಬಾಲಕೃಷ್ಣ  ಮಾತನಾಡಿ, ವಿದ್ಯಾರ್ಥಿಗಳು ಉದ್ಯೋಗ ಪಡೆಯಲು ಇರುವ ಅವಕಾಶಗಳನ್ನು ಒಳ್ಳೆಯ ರೀತಿಯಲ್ಲಿ ಬಳಸಿಕೊಳ್ಳಬೇಕು. ಸಾಮಾಜಿಕ ಜಾಲತಾಣಗಳನ್ನು ಹಾಗೂ ಆಧುನಿಕ ತಂತ್ರ ಜ್ಞಾನವನ್ನು ದುರುಪಯೋಗ ಮಾಡದೇ ಒಳ್ಳೆಯ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದರು.


ಅರ್ಥಶಾಸ್ತ್ರ ವಿಭಾಗದ ವಿಶ್ರಾಂತ ಪ್ರಾಧ್ಯಾಪಕ ಡಾ.ಪಿ.ಕೆ ಬಾಲಕೃಷ್ಣ, ಕಾಲೇಜಿನ ಹಿರಿಯ ವಿದ್ಯಾರ್ಥಿ, ಪತ್ರಕರ್ತ ಹಾಗೂ ಸಾಹಿತಿ ಗೋಪಾಲಕೃಷ್ಣ ಕುಂಟಿನಿ, ವಿಶ್ರಾಂತ ಕಚೇರಿ ಅಧೀಕ್ಷಕಿ ಸಾವಿತ್ರಿ, ಎನ್.ಎಚ್, ವಿಶ್ರಾಂತ ಪ್ರಥಮ ದರ್ಜೆ ಸಹಾಯಕ ಅನಂತ ಪದ್ಮನಾಭ ಪ್ರಭು ಅವರನ್ನು ಗೌರವಿಸಲಾಯಿತು.


ವಿಶೇಷ ಸಾಧನೆಗೈದ ವಿದ್ಯಾರ್ಥಿಗಳನ್ನು ಹಾಗೂ ವಿಶ್ವವಿದ್ಯಾಲಯ ಮಟ್ಟದಲ್ಲಿ ರ್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಪುಸ್ತಕ ನೀಡಿ ಹಿರಿಯ ವಿದ್ಯಾರ್ಥಿ ಸಂಘಕ್ಕೆ ಸ್ವಾಗತಿಸ ಲಾಯಿತು. ಕಾರ್ಯಕ್ರಮದಲ್ಲಿ ವಿವೇಕಾನಂದ ಕಾಲೇಜು ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸತೀಶ್ ರಾವ್.ಪಿ, ಕೋಶಾಧಿಕಾರಿ ವಾಮನ ಪೈ,ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ, ಸಂಚಾಲಕ ಮುರಳಿ ಕೃಷ್ಣ ಕೆ.ಎನ್ ಉಪಸ್ಥಿತರಿದ್ದರು.


ಕಾರ್ಯಕ್ರಮವನ್ನು ಕಾಲೇಜಿನ ಉಪಪ್ರಾಂಶುಪಾಲ ಪ್ರೊ. ಶಿವಪ್ರಸಾದ್ ಕೆ.ಎಸ್ ಸ್ವಾಗತಿಸಿ ಐಕ್ಯೂಎಸಿ ಸಂಯೋಜಕಿ ಹಾಗೂ ವಾಣಿಜ್ಯ ವಿಭಾಗದ ಮುಖ್ಯಸ್ಥೆ ಡಾ. ರವಿಕಲಾ ವಂದಿಸಿದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮನಮೋಹನ ಎಂ ಹಾಗೂ ಸ್ನಾತಕೋತ್ತರ ವಿಭಾಗದ ವಿದ್ಯಾರ್ಥಿನಿ ಅನನ್ಯ ಅಡಿಗ ಕಾರ್ಯಕ್ರಮ ನಿರ್ವಹಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top