ಶಂಕರ ಭಗವತ್ಪಾದರು ಅದ್ವೈತ ತತ್ವವನ್ನು ಪ್ರತಿಪಾದಿಸಿದರು: ಸದಾಶಿವ ಉಳ್ಳಾಲ
ನಂತೂರು: ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ, ಹವ್ಯಕ ಮಂಡಲ ಮಂಗಳೂರು ಸಹಕಾರದಲ್ಲಿ ಮಂಗಳೂರು ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಶಂಕರಶ್ರೀ ಸಭಾಭವನದಲ್ಲಿ ಶುಕ್ರವಾರ ಶ್ರೀ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮ ಸಂಪನ್ನಗೊಂಡಿತು.
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ ಅವರು ಉದ್ಘಾಟಿಸಿ, ಶ್ರೀ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು, ಮಾತನಾಡಿ, ಶ್ರೀ ಶಂಕರ ಭಗವತ್ಪಾದರು ಸನಾತನ ಸಂಸ್ಕೃತಿಯನ್ನು ಉಳಿಸಿ, ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸಿದರು. ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು ಎಂದು ಹೇಳಿದರು.
ನಂತೂರು ಶ್ರೀ ಭಾರತೀ ಸಮೂಹ ಸಂಸ್ಥೆಯ ಸೇವಾ ಸಮಿತಿ ಕಾರ್ಯಾಧ್ಯಕ್ಷ ಗಣೇಶಮೋಹನ ಕಾಶಿಮಠ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯೋಪಾಧ್ಯಾಯ ಭಾಸ್ಕರ ಭಟ್ ಹೊಸಮನೆ ಅವರು ಉಪನ್ಯಾಸ ನೀಡಿ, ಶ್ರೀ ಶಂಕರರು ಶೈವ, ವೈಷ್ಣವ, ಶಾಕ್ತ, ಗಾಣಪತ್ಯ, ಸೌರ ಹಾಗೂ ಸ್ಕಂದ ಮತಗಳನ್ನು ಒಗ್ಗೂಡಿಸಿ, ಷಣ್ಮತ ಪ್ರತಿಷ್ಠಾಪಕರಾದರು. ಆದಿಶಂಕರರು ಭಗವದ್ಗೀತೆ, ಉಪನಿಷತ್ ಹಾಗೂ ಬ್ರಹ್ಮ ಸೂತ್ರಗಳಿಗೆ ಭಾಷ್ಯ ಬರೆದ ಮೊದಲ ಆಚಾರ್ಯರಾದರು. ಎಂದು ಹೇಳಿದರು.
ಶ್ರೀ ಭಾರತೀ ಸಮೂಹ ಸಂಸ್ಥೆಯ ಕೋ ಆರ್ಡಿನೇಟರ್ ಜಯಂತಿ, ಶ್ರೀ ಭಾರತೀ ಪಪೂ ಕಾಲೇಜಿನ ಪ್ರಾಂಶುಪಾಲ ಸಂದೀಪ್ ಆಚಾರ್ಯ, ಶಂಕರಶ್ರೀ ವಸಂತ ವೇದಪಾಠಶಾಲೆ ಅಧ್ಯಾಪಕ ವೇ.ಮೂ. ಅಮೈ ಶಿವಪ್ರಸಾದ್ ಭಟ್ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿ, ವಂದಿಸಿದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ