ಹೊಸಪೇಟೆಯಲ್ಲಿ ಮೇ.20ರಂದು ರಾಜ್ಯ ಸರ್ಕಾರದ ಸಾಧನಾ ಸಮಾವೇಶ

Upayuktha
0


ಬಳ್ಳಾರಿ: ವಿಜಯನಗರ ಜಿಲ್ಲೆ ಹೊಸಪೇಟೆಯ ವಿಜಯನಗರ ಕಾಲೇಜು ಮೈದಾನದಲ್ಲಿ ಮೇ20 ರಂದು ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನಾ ಸಮಾವೇಶ ಏರ್ಪಡಿಸಲು ತೀರ್ಮಾನಿಸಲಾಗಿದೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.

ಹೊಸಪೇಟೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಅವರ ಅಧ್ಯಕ್ಷತೆಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ನಂತರ ಅವರು ಪತ್ರಿಕಾ ಹೇಳಿಕೆ ನೀಡಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಾರಥ್ಯದಲ್ಲಿ ಯಶಸ್ವಿಯಾಗಿ ಎರಡು ವರ್ಷ ಪೂರೈಸಿದ್ದು, ಸರ್ಕಾರದ ಸಾಧನೆಗಳ ಬಗ್ಗೆ ಜನರೊಂದಿಗೆ ಸಂವಾದ ಏರ್ಪಡಿಸುವ ನಿಟ್ಟಿನಲ್ಲಿ ಈ ಸಮಾವೇಶ ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ನಾರಾ ಭರತ್ ರೆಡ್ಡಿ, ಸಾಧನಾ ಸಮಾವೇಶ ಯಶಸ್ವಿಗೊಳಿಸಲು ಬೇಕಾಗುವ ಎಲ್ಲ ಸಹಕಾರವನ್ನು ನೀಡಲಾಗುವುದು ಎಂದು ತಿಳಿಸಿದರು.

ಮೇ.20 ರಂದು ನಡೆಯಲಿರುವ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಸಂಪುಟದ ಎಲ್ಲ ಸಚಿವರು ಕಲ್ಯಾಣ ಕರ್ನಾಟಕದ ಎಲ್ಲ ಶಾಸಕರು, ಸಂಸದರು ಭಾಗಿಯಾಗಲಿದ್ದಾರೆ ಎಂದು ಶಾಸಕ ನಾರಾ ಭರತ್ ರೆಡ್ಡಿ ತಿಳಿಸಿದ್ದಾರೆ.
 
ಸಮಾವೇಶದಲ್ಲಿ ವಿವಿಧ ಜಿಲ್ಲೆಗಳಿಂದ ಅಂದಾಜು 2 ಲಕ್ಷ ಜನ ಭಾಗವಹಿಸುವ ನಿರೀಕ್ಷೆ ಇದೆ. ಸಭೆಯಲ್ಲಿ ಜಿಲ್ಲಾಧಿಕಾರಿ ದಿವಾಕರ್, ಶಾಸಕರಾದ ಜೆ.ಎನ್.ಗಣೇಶ್, ಗವಿಯಪ್ಪ, ಮಾಜಿ ಶಾಸಕ ಭೀಮಾ ನಾಯ್ಕ್ ಸೇರಿದಂತೆ ಹಲವರು ಭಾಗಿಯಾಗಿದ್ದರು.ಸಂಸದ ತುಕಾರಾಂ, ಬಳ್ಳಾರಿ ಡಿಸಿಸಿ ಅಧ್ಯಕ್ಷ ಅಲ್ಲಂ ಪ್ರಶಾಂತ್, ಹುಡಾ ಅಧ್ಯಕ್ಷ ಇಮಾಮ್ ನಿಯಾಜಿ ಹಾಜರಿದ್ದರು.

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top