ಮೇ 12 ರಿಂದ 26 ರ ವರೆಗೆ ಉಡುಪಿ ಜಿಲ್ಲಾ ಬಾಲಭವನದಲ್ಲಿ ಬೇಸಿಗೆ ಶಿಬಿರ

Chandrashekhara Kulamarva
0



ಉಡುಪಿ: ನಗರದ ಬ್ರಹ್ಮಗಿರಿಯ ಜಿಲ್ಲಾ ಬಾಲಭವನದಲ್ಲಿ ಮೇ 12 ರಿಂದ 26 ರ ವರೆಗೆ ಬೆಳಗ್ಗೆ 9.30 ರಿಂದ ಮಧ್ಯಾಹ್ನ 1 ಗಂಟೆಯವರೆಗೆ 9 ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಏರ್ಪಡಿಸಲಾಗುತ್ತಿದ್ದು, ಶಿಬಿರದಲ್ಲಿ ಒಟ್ಟು 60 ಮಕ್ಕಳಿಗೆ ಸೃಜನಾತ್ಮಕ ಹಾಗೂ ಕ್ರಿಯಾತ್ಮಕ ಕಲೆಗಳ ಕುರಿತು ತರಬೇತಿ ನೀಡಲಾಗುವುದು.

ಅರ್ಜಿ ಸಲ್ಲಿಸಲು ಮೇ 11 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಬಾಲಭವನ, ಬ್ರಹ್ಮಗಿರಿ, ಉಡುಪಿ ದೂರವಾಣಿ ಸಂಖ್ಯೆ: 0820-2574978 ಅನ್ನು ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
To Top