ಬಳ್ಳಾರಿಯ `ಹ್ಯಾಲೀಸ್ ಬ್ಲೂ ಸಂಸ್ಥೆ’ಗೆ `ಉದ್ಯಮಿ ರತ್ನ’ ಪ್ರಶಸ್ತಿ

Chandrashekhara Kulamarva
0



ಬಳ್ಳಾರಿ: ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘವು ಪ್ರತೀ ವರ್ಷ ನೀಡುವ `ಉದ್ಯಮಿ ರತ್ನ-2024’ರ ಪ್ರಶಸ್ತಿಯು ಬಳ್ಳಾರಿಯ ಹ್ಯಾಲೀಸ್ ಬ್ಲೂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ವಿಶ್ವಮೂರ್ತಿ ಅವರಿಗೆ ಸಂದಿದೆ.


ಹುಬ್ಬಳ್ಳಿಯಲ್ಲಿ ನಡೆದ ಉತ್ತರ ಕರ್ನಾಟಕ ಇಂಡಸ್ಟ್ರಿಯಲ್ ಮತ್ತು ಮ್ಯಾನ್ಯು಼ಫಕ್ಚರಿಂಗ್ ಎಕ್ಸಿಬಿಷನಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಜಗದೀಶ್ ಎಸ್. ಶೆಟ್ಟರ್, ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಗಿರೀಶ್ ನಲ್ವಡಿ, ಗೌರವ ಕಾರ್ಯದರ್ಶಿ ಶಂಕರ್ ಹಿರೇಮಠ್ ಮತ್ತು ಪದಾಧಿಕಾರಿಗಳು ಕೆ.ಎಂ. ವಿಶ್ವಮೂರ್ತಿ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.


ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘವು ನೀಡಿರುವ `ಉದ್ಯಮಿ ರತ್ನ’ ಪ್ರಶಸ್ತಿಯನ್ನು ಸ್ವೀಕರಿಸಿರುವ ಬಳ್ಳಾರಿಯ ಹ್ಯಾಲೀಸ್ ಬ್ಲೂ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ವಿಶ್ವಮೂರ್ತಿ ಅವರಿಗೆ ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ, ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು, ಜಂಟಿ ಕಾರ್ಯದರ್ಶಿ  ಡಾ. ಮರ್ಚೇಡ್ ಮಲ್ಲಿಕಾರ್ಜುನಗೌಡ, ಉಪಾಧ್ಯಕ್ಷ ಎಸ್. ದೊಡ್ಡನಗೌಡ, ಕಾರ್ಯಕಾರಿ ಸಮಿತಿ ಸದಸ್ಯರಾದ ನಾಗಳ್ಳಿ ರಮೇಶ್, ಟಿ. ಶ್ರೀನಿವಾಸರಾವ್, ವಿಶೇಷ ಆಹ್ವಾನಿತರಾದ ಕೆ.ಎಂ. ಭೋಗೇಶ್, ಬಳ್ಳಾರಿ ಜಿಲ್ಲಾ ಕೈಗಾರಿಕಾ ಸಂಘದ ಅಧ್ಯಕ್ಷ ವಿ. ರಾಮಚಂದ್ರ, ಕಾರ್ಯದರ್ಶಿ ವಾಸುದೇವ ಆಚಾರ್, ಕಾರ್ಯಕಾರಿ ಸಮಿತಿ ಸದಸ್ಯರಾದ ನಿರ್ಮಾ ಪೇಂಟ್ಸ್ ನಾಗರಾಜ್, ಮಾಜಿ ಅಧ್ಯಕ್ಷರಾದ ಕೆ.ಎಂ. ಶಿವಮೂರ್ತಿ, ಎ. ಸುಧಾಕರ್ ಮತ್ತು ಪದಾಧಿಕಾರಿಗಳು ಹಾಗೂ ಆಜೀವ ಸದಸ್ಯರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ವಿಶ್ವಮೂರ್ತಿ ಅವರು ಪ್ರತ್ಯಕ್ಷವಾಗಿ,ಪರೋಕ್ಷವಾಗಿ ಸಹಕರಿಸಿದ ಎಲ್ಲಾ ಗಣ್ಯರಿಗೂ ಧನ್ಯವಾದಗಳನ್ನು ಸಲ್ಲಿಸಿದ್ದಾರೆ. 


ಹ್ಯಾಲೀಸ್ ಬ್ಲೂ ಸಂಸ್ಥೆಯ ನಿರ್ದೇಶಕರಾದ ಶಿವಮೂರ್ತಿ ಮತ್ತು ಅವರ ಕುಟುಂಬ ಸದಸ್ಯರು, ಸಂಸ್ಥೆಯ ಸಿಬ್ಬಂದಿ ಮತ್ತಿತರರು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter




إرسال تعليق

0 تعليقات
إرسال تعليق (0)
To Top