ಕೋಸ್ಟಲ್ ಬರ್ತ್ ಅಭಿವೃದ್ಧಿ : ಪರಿಸರ ಸಾರ್ವಜನಿಕ ಅಲಿಕೆ ಸಭೆ

Upayuktha
0


ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕು ಹಂಗಾರಕಟ್ಟೆಯಲ್ಲಿ ಕರ್ನಾಟಕ ಜಲಸಾರಿಗೆ ಮಂಡಳಿ, ಬಂದರು ಮತ್ತು ಮೀನುಗಾರಿಕೆ ವಿಭಾಗ, ಉಡುಪಿ ಇವರು ಸಾಗರಮಾಲ ಯೋಜನೆಯಡಿಯಲ್ಲಿ ಕರ್ನಾಟಕ ಕರಾವಳಿಯಲ್ಲಿ ಸಂಚರಿಸುವ ವಾಣಿಜ್ಯ ಹಡಗುಗಳಿಗೆ ಸುರಕ್ಷಿತವಾಗಿ ತಂಗಲು ಆಶ್ರಯ ಕಲ್ಪಿಸಲು ಸಿಮೆಂಟ್, ಖಾದ್ಯತೈಲ ಮತ್ತು ಕೃಷಿ ಉತ್ಪನ್ನಗಳು ಮತ್ತು ಇತರ ವಾಣಿಜ್ಯ ಸರಕುಗಳನ್ನು ನಿರ್ವಹಿಸಲು, ಸುರಕ್ಷಿತ ಆಶ್ರಯ ಮತ್ತು ಸಂಗ್ರಹಣೆಗಾಗಿ ಬೇಡಿಕೆಗಳಿರುವುದರಿಂದ, ಸರಕು ಸಾಗಣೆಯ ಅನುಕೂಲಕ್ಕಾಗಿ 1.62 ಹೆಕ್ಟೇರ್ ಪ್ರದೇಶದಲ್ಲಿ ಕೋಸ್ಟಲ್ ಬರ್ತ್ ಅನ್ನು ಅಭಿವೃದ್ಧಿಪಡಿಸುವ ಕುರಿತು ಪರಿಸರ ಸಾರ್ವಜನಿಕ ಆಲಿಕೆ ಸಭೆಯು ಇಂದು ಹಂಗಾರಕಟ್ಟೆ ಫಿಶ್‍ರೀಸ್‍ನ ಜೆಟ್ಟಿ ಸಮೀಪದ ಹರಾಜು ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ನಡೆಯಿತು.


ಜಿಲ್ಲಾಧಿಕಾರಿಗಳು, ಪ್ರಸ್ತಾವಿತ ಯೋಜನೆಯ ಉದ್ದೇಶದ ಕುರಿತು ಸಾರ್ವಜನಿಕರಿಗೆ ತಿಳಿಸಿದರು. ನಂತರ ಯೋಜನಾದಾರರು ಯೋಜನೆಯ ಬಗ್ಗೆ ಶಕ್ತಿ ಬಿಂದು ಪ್ರದರ್ಶನ ನೀಡಿದರು. ಸಭೆಯಲ್ಲಿ ಭಾಗವಹಿಸಿದ್ದ ಸಾರ್ವಜನಿಕರ ಅಭಿಪ್ರಾಯ, ಅನಿಸಿಕೆ ಹಾಗೂ ಅಹವಾಲುಗಳನ್ನು ಸ್ವೀಕರಿಸಲಾಯಿತು.


ಸಭೆಯಲ್ಲಿ ಮೀನುಗಾರರ ಸಂಘದವರು ಹಾಗೂ ಬಂದರು ಅಭಿವೃದ್ಧಿ ಸಮಿತಿಯ ಸಂಘದವರು ಪ್ರಸ್ತಾಪಿತ ಯೋಜನೆಯ ಅಭಿವೃದ್ಧಿಗೆ ಯಾವುದೇ ಅಭ್ಯಂತರವಿರುವುದಿಲ್ಲ ಆದರೆ, ಸದರಿ ಪ್ರಸ್ತಾಪಿತ ಸ್ಥಳದಲ್ಲಿ  ಮೀನುಗಾರರ ದೋಣಿಯನ್ನು ಸಹ ನಿಲುಗಡೆ ಮಾಡಲು ಅವಕಾಶ ಮಾಡಕೊಡುವಂತೆ, ಅಳಿವೆಯಲ್ಲಿ 3.5ಮೀಟರ್ ಗಿಂತ ಹೆಚ್ಚಿನ ಹೂಳನ್ನು ತೆಗೆಯದಂತೆ, ಬ್ರೇಕ್ ವಾಟರ್ ನಿರ್ಮಿಸಲು ಹಾಗೂ ಸುತ್ತಮುತ್ತ  ವಾಸದ ಕುಟುಂಬಗಳಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗದ ರೀತಿಯಲ್ಲಿ ಯೋಜನೆಯನ್ನು ಮಾಡಬೇಕೆಂದು ಮನವಿ ಮಾಡಿದರು.


ಸಭೆಯಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ ಪ್ರಾದೇಶಿಕ ಕಛೇರಿಯ ಪರಿಸರ ಅಧಿಕಾರಿ ಕೆ. ಕೀರ್ತೀ ಕುಮಾರ್, ಹಂಗಾರಕಟ್ಟೆ ಬೇಂಗ್ರೆ ಮೀನುಗಾರರ ಸಂಘದ ಅಧ್ಯಕ್ಷ ರಾಜು ಬಂಗೇರ, ಹಂಗಾರಕಟ್ಟೆ ಬೇಂಗ್ರೆ ಬಂದರು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜೇಂದ್ರ ಸುವರ್ಣ, ಸಮಿತಿಯ ಸಲಹೆಗಾರರಾದ ಕೇಶವ್ ಕುಂದರ್, ಶಂಕರ್ ಬಂಗೇg, ಹಾಗೂ ಉತ್ತರ ಕರ್ಕೇರ ಉಪಸ್ಥಿತರಿದ್ದರು.



   ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top