ಉಜಿರೆ: ಎಸ್‌ಡಿಎಂ ಮಹಿಳಾ ಐಟಿಐ ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Upayuktha
0



ಉಜಿರೆ: ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ 2024-25 ನೇ ಸಾಲಿನ ವಿದ್ಯಾರ್ಥಿನಿಯರಿಗೆ ಮೈಸೂರಿನ ಪ್ರತಿಷ್ಠಿತ ಕಂಪೆನಿಗಳಲ್ಲಿ ಒಂದಾದ ಶಾಹಿ ಎಕ್ಸ್‌ಪೋರ್ಟ್ಸ್ (SHAHI EXPORTS) ವತಿಯಿಂದ ಇಂದು (ಮೇ 30) ಕ್ಯಾಂಪಸ್ ಸಂದರ್ಶನ ನಡೆಯಿತು.


ಕಂಪೆನಿಯ ಮಾನವ ಸಂಪನ್ಮೂಲ ವಿಭಾಗದ ಉಪ ವ್ಯವಸ್ಥಾಪಕ ಪ್ರಕಾಶ್ ಅವರು ಕಂಪೆನಿಯ ಧ್ಯೇಯೋದ್ದೇಶ, ಉದ್ಯೋಗದ ವಿಧಾನ ಇತ್ಯಾದಿ ಕುರಿತು ಮಾಹಿತಿ ನೀಡಿದರು.


ಬಳಿಕ, ಬರವಣಿಗೆ ಹಾಗೂ ಮೌಖಿಕ ಸಂದರ್ಶನದ ಮೂಲಕ ವಿದ್ಯಾರ್ಥಿ - ವಿದ್ಯಾರ್ಥಿನಿಯರ ಆಯ್ಕೆ ಪ್ರಕ್ರಿಯೆ ನಡೆಯಿತು. ಮಾನವ ಸಂಪನ್ಮೂಲ ವಿಭಾಗದ ಇನ್ನೋರ್ವ ಅಧಿಕಾರಿ ಸುಮನ್ ರಾಜ್ ಸಹಕರಿಸಿದರು. ಅಂತಿಮವಾಗಿ ಆಯ್ಕೆ ಆದ ಅಭ್ಯರ್ಥಿಗಳನ್ನು ಆಗಸ್ಟ್ ಮೊದಲ ವಾರ ಉದ್ಯೋಗಕ್ಕೆ ಸೇರಲು ಅವಕಾಶ ಮಾಡಿಕೊಡುವುದಾಗಿ ಈ ಸಂದರ್ಭದಲ್ಲಿ ಪ್ರಕಾಶ್ ತಿಳಿಸಿದರು.


ಕಾಲೇಜಿನ ಪ್ರಾಂಶುಪಾಲ ಪ್ರಕಾಶ್ ಕಾಮತ್ ಸ್ವಾಗತಿಸಿ ಪ್ರಸ್ತಾವಿಸಿದರು. ಎಸ್.ಡಿ.ಎಂ. ಐ.ಟಿ.ಐ. ವೇಣೂರಿನ ನೇಮಕಾತಿ ಅಧಿಕಾರಿ ಶ್ರೇಯಸ್ ಮತ್ತು ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಯ ಕಿರಿಯ ತರಬೇತಿ ಅಧಿಕಾರಿಗಳು ಉಪಸ್ಥಿತರಿದ್ದರು.


ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಹಾಗೂ ನೆಲ್ಯಾಡಿ ಬೆಥನಿ ಐ.ಟಿ.ಐ. ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಭಾಗವಹಿಸಿದ್ದರು. ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು.


Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top